ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | BHADRAVATHI | 23 ಅಕ್ಟೋಬರ್ 2019
ಭದ್ರಾವತಿ ವಿಎಐಎಸ್ಎಲ್ ಕಾರ್ಖಾನೆ ಮುಂದೆ ಮತ್ತೊಮ್ಮೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಕಾರ್ಮಿಕರು ಸಿದ್ಧತೆ ನಡೆಸದ್ದಾರೆ. ಗುತ್ತಿಗೆ ಕಾರ್ಮಿಕರಿಗೆ ಸರಿಯಾಗಿ ಕೆಲಸ ಕೊಡದೆ ಇರುವುದೆ ಮುಷ್ಕರಕ್ಕೆ ಕಾರಣವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕಾರ್ಖಾನೆ ಉತ್ಪಾದನಾ ಘಟಕಗಳಲ್ಲಿ ಕೆಲಸ ಮಾಡುವ ಗುತ್ತಿಗೆ ಕಾರ್ಮಿಕರಿಗೆ ತಿಂಗಳಿಗೆ 13 ದಿನಗಳ ಕೆಲಸ ಕೊಡುವುದಾಗಿ ಭರವಸೆ ನೀಡಿದ್ದ ವಿಐಎಸ್ಪಿ ಆಡಳಿತ ಮಂಡಳಿ ಸರಿಯಾಗಿ ಕೆಲಸ ನೀಡದೆ ವಚನಭ್ರಷ್ಟವಾಗಿದೆ ಎಂದು ಆರೋಪಿಸಿ ವಿಐಎಸ್ಎಲ್ ಕಾಂಟ್ರ್ಯಾಕ್ಟ್ ವರ್ಕರ್ ಯೂನಿಯನ್ (ಸಿಐಟಿಯು), ವಿಐಎಸ್ಎಲ್ ಎಂಪ್ಲಾಯಿಸ್ ಅಸೋಸಿಯೇಶನ್( ಎಐಟಿಯುಸಿ) ಆ.24ರಂದು ಕಾರ್ಖಾನೆ ಗೇಟ್ ಎದುರು ಮತ್ತೊಮ್ಮೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿವೆ.
2019ರ ಫೆಬ್ರವರಿಯಲ್ಲಿ ಕೇಂದ್ರ ಉಕ್ಕು ಸಚಿವರ ದೆಹಲಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸೈಲ್ ಮತ್ತು ವಿಐಎಸ್ಎಲ್ ಆಡಳಿತ ಮಂಡಳಿ ಉತ್ಪಾದನಾ ಘಟಕಗಳನ್ನು ಆರಂಭಿಸಿ ಗುತ್ತಿಗೆ ಕಾರ್ಮಿಕರಿಗೆ ನಿರಂತರ ಕೆಲಸ ನೀಡುವುದಾಗಿ ಕೊಟ್ಟ ಭರವಸೆಗಳು ಹುಸಿಯಾಗಿವೆ. ಗುತ್ತಿಗೆ ಪಡೆದಿರುವ ಗುತ್ತಿಗೆದಾರನ ಜಾಬ್ ಟೆಂಡರ್ ಕೂಡ ಸ್ಥಗಿತಗೊಂಡಿದೆ. ಇದರಿಂದಾಗಿ ಗುತ್ತಿಗೆದಾರನ ಪರಿಸ್ಥಿತಿ ಹದಗೆಟ್ಟಿದ್ದು ಕುಟುಂಬ ನಿರ್ವಹಣೆ ದುಸ್ತರವಾಗಿದೆ ಆದ್ದರಿಂದ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ ಎಂದು ಕಾರ್ಮಿಕರು ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]