| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಭದ್ರಾವತಿ : ಮಹಿಳೆಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಆಕೆಯ ಕುಟುಂಬದವರು ಆರೋಪಿಸಿದ್ದಾರೆ. ಅಲ್ಲದೆ ಹೆದ್ದಾರಿಯಲ್ಲಿ ಮೃತದೇಹವನ್ನು ಇರಿಸಿ ಪ್ರತಿಭಟನೆ (Protest) ನಡೆಸಿದರು.
ಇದನ್ನೂ ಓದಿ » ಸಾಗರದಲ್ಲಿ ಲಾರಿ, ಕಾರು ಪಲ್ಟಿ, ಅಪಘಾತಕ್ಕೆ ಕಾರಣ ಹಾವು, ಏನಿದು ಪ್ರಕರಣ?
ಕಳೆದ ರಾತ್ರಿ ಭದ್ರಾವತಿ ತಾಲೂಕು ಹುಣಸೇಕಟ್ಟೆ ಜಂಕ್ಷನ್‌ನಲ್ಲಿ ಅಶ್ವಿನಿ ಪ್ರಮೋದ್ (27) ಎಂಬ ಗೃಹಿಣಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಗಂಡ ಮನೆಗೆ ಮರಳಿದಾಗ ಅಶ್ವಿನಿ ನೇಣು ಬಿಗಿದುಕೊಂಡಿರುವ ವಿಷಯ ಬೆಳಕಿಗೆ ಬಂದಿದೆ.
ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆತ್ಮಹತ್ಯೆಯಲ್ಲ, ಕೊಲೆ ಅಂತಾ ಆರೋಪ
ಇನ್ನು, ಅಶ್ವಿನಿಯದ್ದು ಆತ್ಮಹತ್ಯೆಯಲ್ಲ ಕೊಲೆ ಎಂದು ಆಕೆಯ ಕುಟುಂಬದವರು ಆರೋಪಿಸಿದರು. ಅಶ್ವನಿಯ ಗಂಡನ ಮನೆಯವರೆ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ತಪ್ಪಿತಸ್ಥರನ್ನು ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪಟ್ಟು ಹಿಡಿದಿದ್ದಾರೆ.
![]()
ಹುಣಸೇಕಟ್ಟೆ ಜಂಕ್ಷನ್‌ನಲ್ಲಿ ರಸ್ತೆಯ ಮೇಲೆ ಅಶ್ವಿನಿಯ ಮೃತದೇಹವನ್ನು ಇರಿಸಿ ಪ್ರತಿಭಟನೆ (Protest) ನಡೆಸಿದರು. ಅಶ್ವಿನಿಯ ಕುಟುಂಬದವರು, ಸಂಬಂಧಿಕರು, ವಿವಿಧ ಸಂಘಟನೆಗಳ ಪ್ರಮುಖರು ಪ್ರತಿಭಟನೆಯಲ್ಲಿ ಇದ್ದರು.

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
- ದಿನ ಪಂಚಾಂಗ, ಇಂದಿನ ರಾಶಿ ಭವಿಷ್ಯ – ಓದಲು ಇಲ್ಲಿ ಕ್ಲಿಕ್ ಮಾಡಿ
- ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
- ಅಡಿಕೆ ಧಾರಣೆ | 11 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
- ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?
- ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
![]()