ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 21 AUGUST 2023
HOLEHONNURU : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ (Gandhi Statue) ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಹೊಳೆಹೊನ್ನೂರು ಗಾಂಧಿ ಸರ್ಕಲ್ ಬಳಿ ರಸ್ತೆ ತಡೆ ನಡೆಸಿದರು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಹೊಳೆಹೊನ್ನೂರಿನ ಗಾಂಧಿ ಸರ್ಕಲ್‌ನಲ್ಲಿರುವ ಗಾಂಧಿ ಪ್ರತಿಮೆಯನ್ನು (Gandhi Statue) ಕಡಿಗೇಡಿಗಳು ಧ್ವಂಸಗೊಳಿಸಿದ್ದರು. ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ – ರಾತ್ರೋರಾತ್ರಿ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ, ಆಕ್ರೋಶ
ವಿಚಾರ ತಿಳಿಯುತ್ತಿದ್ದಂತೆ ಜನರು ಗುಂಪುಗೂಡಿದ್ದು ಕಿಡಿಗೇಡಿಗಳನ್ನ ಬಂಧಿಸುವಂತೆ ಆಗ್ರಹಿಸಿದರು. ಅಲ್ಲದೆ ಗಾಂಧಿ ಪ್ರತಿಮೆ ಮುಂಭಾಗ ರಸ್ತೆ ತಡೆ ನಡೆಸಿದರು. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹೊಳೆಹೊನ್ನೂರಿನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.