ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | PUFFED RICE | 27 ಮೇ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಅಗತ್ಯ ವಸ್ತುಗಳ ಬೆಲೆ ದಿನೇ ದಿನೆ ಗಗನಕ್ಕೇರುತ್ತಿದೆ. ಈ ಮದ್ಯೆ ಮಂಡಕ್ಕಿ ದರ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಭದ್ರಾವತಿಯ ಸೀಗೆಬಾಗಿಯಲ್ಲಿ ನಡೆದ ಸಹ್ಯಾದ್ರಿ ಮಂಡಕ್ಕಿ ಉತ್ಪಾದನಾ ಮತ್ತು ಮಾರಾಟ, ವಿವಿಧ ಕೈಗಾರಿಕೆದಾರರ ಸಹಕಾರ ಸಂಘದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಎಷ್ಟಾಯ್ತು ಮಂಡಕ್ಕಿ ದರ?
ಭತ್ತದ ಬೆಲೆ ಹೆಚ್ಚಳವಾಗಿದೆ. ವಿದ್ಯುತ್ ದರವು ದುಬಾರಿಯಾಗಿದೆ. ಕಾರ್ಮಿಕರ ಕೂಲಿ, ಕಚ್ಚಾ ವಸ್ತುಗಳ ಬೆಲೆಯು ಏರಿಕೆಯಾಗಿದೆ. ಇಂತಹ ಸಂದರ್ಭ ಕಡಿಮೆ ದರದಲ್ಲಿ ಮಂಡಕ್ಕಿ ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ಮಂಡಕ್ಕಿ ಉತ್ಪಾದಕರು ತಮ್ಮ ನೋವು ತೋಡಿಕೊಂಡರು.
ಇದೇ ವೇಳೆ 100 ಲೀಟರ್ ಮಂಡಕ್ಕಿಗೆ 450 ರೂ. ದರ ನಿಗದಿ ಮಾಡಲು ತೀರ್ಮಾನಿಸಲಾಯಿತು.
ಸಹಕಾರ ಸಂಘದ ಅಧ್ಯಕ್ಷ ಖಾದರ್ ಖಾನ್ ಅಧ್ಯಕ್ಷತೆ ವಹಿಸಿದ್ದರು. ಚಿಕ್ಕಮಗಳೂರಿನ ಪಾಪಣ್ಣ, ತರೀಕೆರೆಯ ಚಾಂದ್ ಪಾಷಾ, ಬೇಲೂರಿನ ತಜಮ್ಮುಲ್ ಪಾಷಾ, ಶಿವಮೊಗ್ಗದ ಚಂದ್ರಣ್ಣ, ಹಾಸನದ ಕೃಷ್ಣೇಗೌಡ ಸೇರಿದಂತೆ ವಿವಿಧ ಜಿಲ್ಲೆಯ ಮಂಡಕ್ಕಿ ಉತ್ಪಾದಕರು, ಮಾರಾಟಗಾರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಿದ್ಧವಾಗುತ್ತಿದೆ ಮೊಟ್ಟಮೊದಲ ಚಿಟ್ಟೆ ಪಾರ್ಕ್, ಎಲ್ಲಿ? ಹೇಗಿರುತ್ತೆ ಪಾರ್ಕ್?
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.