ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 30 MAY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
HOLEHONNURU : ತುಂಗಭದ್ರ ನದಿಯಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸುತ್ತಿರುವ ಆರೋಪದ ಹಿನ್ನೆಲೆ ಭದ್ರಾವತಿ ತಾಲೂಕು ಸಿದ್ಲಿಪುರದಲ್ಲಿ ಅಧಿಕಾರಿಗಳು ದಾಳಿ (RAID) ನಡೆಸಿದ್ದಾರೆ. ಮರಳು ಸಾಗಣೆಗೆ ಅವಕಾಶ ಮಾಡಿಕೊಟ್ಟ ತೋಟದ ಮಾಲೀಕರ ವಿರುದ್ಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಅಕ್ರಮ ಮರಳು ಗಣಿಗಾರಿಕೆ ಸಾರ್ವಜನಿಕರಿಂದ ನಿರಂತರ ದೂರುಗಳ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಪೊಲೀಸರ ಜೊತೆಗೆ ದಾಳಿ ನಡೆಸಿದ್ದರು. ಅಧಿಕಾರಿಗಳನ್ನು ನೋಡಿ ಕೆಲಸ ಮಾಡುತ್ತಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪರಿಶೀಲನೆ ನಡೆಸಿದಾಗ ತುಂಗ ಭದ್ರ ನದಿ ಪಕ್ಕದಲ್ಲಿರುವ ಎರಡು ತೋಟಗಳ ಮೂಲಕ ಮರಳು ತುಂಬಿಕೊಂಡು ವಾಹನಗಳು ತೆರಳಲು ದಾರಿ ಮಾಡಿಕೊಡಲಾಗಿತ್ತು. ಈ ಮೊದಲೆ ಜಮೀನು ಮಾಲೀಕರಿಗೆ ನೊಟೀಸ್ ನೀಡಿ, ಟ್ರಂಚ್ ನಿರ್ಮಿಸಲಾಗಿತ್ತು. ಆದರೂ ತೋಟದ ಮೂಲಕ ಮರಳು ಸಾಗಣೆ ಮಾಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ ರಸ್ತೆ, ರಾತ್ರಿ ವೇಳೆ ಕಡು ಕತ್ತಲೆ, ರೋಡಲ್ಲೆ ಪಾರ್ಟಿ, ನಿವಾಸಿಗಳಿಗೆ ಭೀತಿ
ಈ ಸಂಬಂಧ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಜ್ಯೋತಿ ಅವರ ದೂರಿನ ಆಧಾರದಲ್ಲಿ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.