SHIVAMOGGA LIVE NEWS, 5 DECEMBER 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಭದ್ರಾವತಿ : ಕಡದಕಟ್ಟೆಯಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೆ ಮೇಲ್ಸೇತುವೆ (Flyover) ಕಾಮಗಾರಿಯನ್ನು ಸಂಸದ ಬಿ.ವೈ.ರಾಘವೇಂದ್ರ ಪರಿಶೀಲನೆ ನಡೆಸಿದರು. ಈ ತಿಂಗಳ ಅಂತ್ಯದೊಳಗೆ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವ ವಿಶ್ವಾಸ ವ್ಯಕ್ತಪಡಿಸಿದರು.
ಶಿವಮೊಗ್ಗ – ಭದ್ರಾವತಿ ಹದ್ದಾರಿಯ ಕಡದಕಟ್ಟೆಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಿಸಲಾಗುತ್ತಿದೆ. 2022ರ ಜನವರಿಯಲ್ಲಿ 23 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಆರಂಭಿಸಲಾಯಿತು. ಈಗ ಮೇಲ್ಸುತುವೆ ಕಾಮಗಾರಿ ಬಹುತೇಕ ಪೂರ್ಣಗೊಳ್ಳುವ ಹಂತಕ್ಕೆ ತಲುಪಿದೆ.
ಸಂಸದ ರಾಘವೇಂದ್ರ ಪರಿಶೀಲನೆ
ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಸಂಸದ ಬಿ.ವೈ.ರಾಘವೇಂದ್ರ ಪರಿಶೀಲಿಸಿದರು. ಈ ಸಂದರ್ಭ ರೈಲ್ವೆ ಇಲಾಖೆ ಅಧಿಕಾರಿಗಳು, ಇಂಜಿಯರ್‌ಗಳ ಜೊತೆ ಚರ್ಚಿಸಿದರು.

2025ರ ಜನವರಿ 1ರಿಂದ ಜನರ ಓಡಾಟಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಕೆಲವು ಸಮಸ್ಯೆಗಳು ಮತ್ತು ಮಳೆಯ ನಡುವೆಯು ನಿಗದಿಯಂತೆ ಈ ತಿಂಗಳ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಂಡಿದೆ. ಎರಡು ವರ್ಷದಿಂದ ಈ ಭಾಗದ ಜನರಿಗೆ ತೊಂದರೆ ಆಗಿದೆ. ಈಗ ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು ಜನರ ಸಂಚಾರ ಸುಗಮವಾಗಲಿದೆ.
– ಬಿ.ವೈ.ರಾಘವೇಂದ್ರ, ಸಂಸದ
![]()
ಬಿಜೆಪಿ ಮುಖಂಡರಾದ ಮಂಗೋಟೆ ರುದ್ರೇಶ್, ಧರ್ಮಪ್ರಸಾದ್, ರಾಜು ತಲ್ಲೂರು ಸೇರಿದಂತೆ ಹಲವರು ಈ ಸಂದರ್ಭ ಇದ್ದರು.


ಇದನ್ನೂ ಓದಿ » ಜನರ ಸಮಸ್ಯೆ ನೋಡಲಾಗದೆ ರಸ್ತೆ ಗುಂಡಿಗಳನ್ನು ಮುಚ್ಚಿದ ಗ್ರಾಮ ಪಂಚಾಯಿತಿ ಸದಸ್ಯ
Flyover
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





