ಭದ್ರಾವತಿಯಲ್ಲಿ ರೆಡ್ ಅಲರ್ಟ್, ತುರ್ತು ಸಂದರ್ಭ ಎದುರಿಸಲು ಸಿದ್ಧವಿರುವಂತೆ ಸೂಚನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS

ಭದ್ರಾವತಿ| ಭಾರಿ ಮಳೆ ಮುನ್ಸೂಚನೆ ಮತ್ತು ಭದ್ರಾ ಜಲಾಶಯದ ಒಳ ಹರಿವು ಹೆಚ್ಚಳವಾಗಿದ್ದು ತಾಲೂಕಿನಲ್ಲಿ ಆತಂಕ ಮೂಡಿದೆ. ಹಾಗಾಗಿ ಭದ್ರಾವತಿಯಲ್ಲಿ ರೆಡ್ ಅಲರ್ಟ್ (RED ALERT) ಘೋಷಣೆ ಮಾಡಲಾಗಿದೆ.

Shimoga Nanjappa Hospital

ಜೋರು ಮಳೆಯಿಂದಾಗಿ ಭದ್ರಾ ಜಲಾಶಯದ ಒಳ ಹರಿವು ಪ್ರಮಾಣ ಹೆಚ್ಚಳವಾಗಿದೆ. ಈಗಾಗಲೇ ಜಲಾಶಯ ಭರ್ತಿಯಾಗಿರುವುದರಿಂದ ಹೆಚ್ಚುವರಿ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದು ಭದ್ರಾವತಿ ನಗರದಲ್ಲಿ ಆತಂಕ ಮೂಡಿಸಿದೆ.

ಭದ್ರಾ ಜಲಾಶಯ ಒಳ ಹರಿವು ಎಷ್ಟಿದೆ?

ಭದ್ರಾ ಜಲಾಶಯಕ್ಕೆ ಗುರುವಾರದಿಂದ ಒಳ ಹರಿವು ಹೆಚ್ಚಳವಾಗಿದೆ. ಶುಕ್ರವಾರವು ಒಳ ಹರಿವು ಪ್ರಮಾಣದಲ್ಲಿ ಭಾರಿ ಏರಿಕೆಯಾಗಿದೆ. ಪ್ರಸ್ತುತ ಜಲಾಶಯದ ಒಳ ಹರಿವು 31,069 ಕ್ಯೂಸೆಕ್ ಇದೆ. ಹೊರ ಹರಿವು 33,175 ಕ್ಯೂಸೆಕ್ ಇದೆ. ಇನ್ನು ಜಲಾಶಯದ ನೀರಿನ ಮಟ್ಟ 186 ಅಡಿಯಷ್ಟು ಇದೆ.

ಭದ್ರಾವತಿಯಲ್ಲಿ RED ALERT

ಮಳೆ ಪ್ರಮಾಣ ಹೆಚ್ಚಳವಾದರೆ ಭದ್ರಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತದೆ. ಇದರಿಂದ ಭದ್ರಾವತಿ ಪಟ್ಟಣದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕವಿದೆ. ಮತ್ತೊಂದೆಡೆ ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಇದೆ ಕಾರಣಕ್ಕೆ ಭದ್ರಾವತಿ ತಾಲೂಕಿನಲ್ಲಿ ರೆಡ್ ಅಲರ್ಟ್ (RED ALERT) ಘೋಷಿಸಿ ತಹಶೀಲ್ದಾರ್ ಆರ್.ಪ್ರದೀಪ್ ಆದೇಶ ಹೊರಡಿಸಿದ್ದಾರೆ.

ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ

ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊಳೆಗೆ ಹರಿಸುವ ಸಾದ್ಯತೆ ಇದೆ. ಆದ್ದರಿಂದ ಭದ್ರಾವತಿ ತಾಲೂಕಿನ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಂಭವವಿದೆ. ಈ ಭಾಗದಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ತಹಶೀಲ್ದಾರ್ ಆರ್.ಪ್ರದೀಪ್ ಮನವಿ ಮಾಡಿದ್ದಾರೆ. ಇನ್ನು, ತುರ್ತು ಸಂದರ್ಭವನ್ನು ಎದುರಿಸಲು ಅಧಿಕಾರಿಗಳು ಸನ್ನದ್ಧವಾಗಿರಬೇಕು ಎಂದು ಸೂಚಿಸಲಾಗಿದೆ.

ಕಳೆದ ಮಳೆಗೆ ಮುಳುಗಿತ್ತು ಭದ್ರಾವತಿ

ಕಳೆದ ತಿಂಗಳು ಭಾರಿ ಮಳೆ ಮತ್ತು ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗಿತ್ತು. ಇದರಿಂದ ಭದ್ರಾವತಿ ಪಟ್ಟಣದ ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತ್ತು. ಹೊಸ ಸೇತುವೆ ಜಲಾವೃತವಾಗಿತ್ತು. ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿತ್ತು. ಈ ಮಧ್ಯೆ ಮಳೆ ಪ್ರಮಾಣ ತಗ್ಗಿದ್ದರಿಂದ ಜನರು ನಿಟ್ಟುಸಿರು ಬಿಟ್ಟಿದ್ದರು. ಈಗ ಪುನಃ ಮಳೆ ಅಬ್ಬರಿಸುತ್ತಿದ್ದು, ಹವಾಮಾನ ಇಲಾಖೆ ಕೂಡ ಜೋರು ಮಳೆಯ ಮುನ್ಸೂಚನೆ ನೀಡಿದೆ. ಇದು ಭದ್ರಾವತಿ ತಾಲೂಕಿನಲ್ಲಿ ಆತಂಕ ಮೂಡಿಸಿದೆ.

 ಇದನ್ನೂ ಓದಿ –  ಹೊಸನಗರದ ಯಡೂರು, ಹುಲಿಕಲ್, ಮಾಸ್ತಿಕಟ್ಟೆಯಲ್ಲಿ ಭಾರಿ ವರ್ಷಧಾರೆ, ಎಷ್ಟು ಮಳೆಯಾಗಿದೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment