ಶಿವಮೊಗ್ಗ ಲೈವ್
ಭದ್ರಾವತಿ: ವಿವಿಧ ಇಲಾಖೆಗಳ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಕಿಶೋರ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಬಾಲ ಹಾಗೂ ಕಿಶೋರ ಕಾರ್ಮಿಕರ ನಿಯಂತ್ರಣಕ್ಕಾಗಿ ಭದ್ರಾವತಿಯ ತರೀಕೆರೆ ರಸ್ತೆ ಭಾಗದಲ್ಲಿ ದಿಢೀರ್ ದಾಳಿ ನಡೆಸಿ ತಪಾಸಣೆ ಮಾಡಿದರು.
ಕೆಲಸದ ಸ್ಥಳದಲ್ಲಿ ಇದ್ದ ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿದೆ. ಇದೇ ವೇಳೆ ನಿಯಮ ಉಲ್ಲಂಘಿಸಿದ ಸಂಸ್ಥೆಯ ಮಾಲೀಕರಿಗೆ ಬಾಲಕಾರ್ಮಿಕ ಕಾಯ್ದೆಯ ಬಗ್ಗೆ ಕಾನೂನು ಜಾಗೃತಿ ಮೂಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಕಾರ್ಮಿಕ ನಿರೀಕ್ಷಕರು, ಯೋಜನಾ ನಿರ್ದೇಶಕರು, ತಾಲ್ಲೂಕು ಆರೋಗ್ಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿ ಉಪಸ್ಥಿತರಿದ್ದರು.