ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 9 MARCH 2021
ಬಿಪಿಎಲ್ ಕಾರ್ಡ್ ಹೊಂದಲು ಅರ್ಹರಲ್ಲದವರು ಸ್ವಯಂ ಪ್ರೇರಿತವಾಗಿ ಕಾರ್ಡನ್ನು ಹಿಂತಿರುಗಿಸಬೇಕು ಎಂದು ಭದ್ರಾವತಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಎಚ್ಚರಿಕೆ ನೀಡಿದೆ.
ಯಾರೆಲ್ಲ ಹಿಂತಿರುಗಿಸಬೇಕು?
ವಾರ್ಷಿಕ 1.20 ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳು
ಸರ್ಕಾರಿ ಅನುದಾನ ಪಡೆಯುತ್ತಿರುವ ಸಿಬ್ಬಂದಿ, ಸರ್ಕಾರಿ ಸ್ವಾಮ್ಯದ ಸಂಸ್ಥೆ, ಮಂಡಳಿ, ನಿಗಮ, ಸ್ವಯತ್ತ ಸಂಸ್ಥೆಯ ಅಧಿಕಾರಿಗಳು, ಸರ್ಕಾರಿ ನೌಕರರು, ವೃತ್ತಿ ತೆರಿಗೆ ಪಾವತಿಸುವ ನೌಕರರು.
ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್‍ಗಿಂತ ಹೆಚ್ಚು ಒಣ ಅಥವಾ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು.
ನಗರ ಪ್ರದೇಶದಲ್ಲಿ 10 ಚ.ಕ್ಕಿಂತ ಹೆಚ್ಚು ವಿಸ್ತೀರ್ಣದ ಸ್ವಂತ ಆರ್‍ಸಿಸಿ ಮನೆ ಹೊಂದಿರುವವರು.
ಸ್ವಂತ ಬಳಕೆಗೆ ನಾಲ್ಕು ಚಕ್ರದ ವಾಹನ ಹೊಂದಿರುವ ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಲು ಅನರ್ಹರಾಗಿರುತ್ತಾರೆ.
ಕಾರ್ಡ್ ಹಿಂತಿರುಗಿಸಲು ಗಡುವು ಫಿಕ್ಸ್
ಬಿಪಿಎಲ್ ಕಾರ್ಡ್ ಹಿಂತಿರುಗಿಸಲು ಮಾರ್ಚ್ 31ರ ಗಡುವು ನೀಡಲಾಗಿದೆ. ತಪ್ಪಿದಲ್ಲಿ ಇಲಾಖೆ ಅಧಿಕಾರಿಗಳೇ ಕಾರ್ಯಾಚರಣೆ ನಡೆಸಿ ಅನರ್ಹರನ್ನು ಪತ್ತೆ ಹಚ್ಚಲಾಗುತ್ತದೆ. ಅಂತಹವರ ವಿರುದ್ಧ ಕ್ರೀಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಆಹಾರ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ ಎಂದು ಇಲಾಖೆಯ ಸಹಾಯಕ ನಿರ್ದೆಶಕರು ತಿಳಿಸಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422