ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ವ್ಯಕ್ತಿಯೊಬ್ಬರಿಗೆ ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿದ್ದ ಆರೋಪಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 2 ವರ್ಷ ಕಠಿಣ ಕಾರಾವಾಸ (imprisonment) ಹಾಗೂ ₹50,500 ದಂಡ ವಿಧಿಸಿ ತೀರ್ಪು ನೀಡಿದೆ.
ಭದ್ರಾವತಿ ತಾಲೂಕಿನ ಅಗರದಹಳ್ಳಿಯ ನಿವಾಸಿ ಎ.ವಿ.ಸುರೇಶ್ (54) ತಮ್ಮ ಮನೆ ಬಳಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಇದರಿಂದ ಮಕ್ಕಳಿಗೆ ಓದಲು ತೊಂದರೆಯಾಗುತ್ತಿದೆ. ನಿಲ್ಲಿಸುವಂತೆ ಪಕ್ಕದ ಮನೆಯವರು ಮನವಿ ಮಾಡಿದ್ದರು. ಈ ವೇಳೆ ಆರೋಪಿ ಸುರೇಶ್ ಅವಾಚ್ಯ ಶಬ್ದಗಳಿಂದ ಬೈದು, ಕೊಲೆ ಬೆದರಿಕೆ ಹಾಕಿದ್ದ. ಅಲ್ಲದೆ ಅಗರದಹಳ್ಳಿ ಕಾಲುದಾರಿಯಲ್ಲಿ ಆರೋಪಿ ಸುರೇಶ್ ಪಕ್ಕದ ಮನೆಯವರನ್ನು ಅಡ್ಡಗಟ್ಟಿ ಜಾತಿ ನಿಂದನೆ ಮಾಡಿದ್ದಾನೆ ಎಂದು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಡಿವೈಎಸ್‌ಪಿ ಆಗಿದ್ದ ಉಮೇಶ್ ಈಶ್ವರ್ ನಾಯ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧಿಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್, ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ್ದಾರೆ. ದಂಡದ ಮೊತ್ತದಲ್ಲಿ ₹25,000 ಹಣವನ್ನು ದೂರುದಾರರಿಗೆ ನೀಡುವಂತೆ ಆದೇಶಿಸಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಎಟಿಎಂನಲ್ಲಿ ದುಡ್ಡು ಬರಲಿಲ್ಲ ಅಂತಾ ಬ್ಯಾಂಕ್‌ಗೆ ತೆರಳಿದ ಭದ್ರಾವತಿಯ ವ್ಯಕ್ತಿಗೆ ಕಾದಿತ್ತು ಶಾಕ್, ಆಗಿದ್ದೇನು?
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






