ತಮ್ಮಡಿಹಳ್ಳಿ ಬಳಿ ಬೈಕ್‌ ಸ್ಕಿಡ್‌ ಆಗಿ ಶಂಕರಘಟ್ಟದ ವ್ಯಕ್ತಿಗೆ ಗಂಭೀರ ಗಾಯ

Published On : ಏಪ್ರಿಲ್ 17, 2026

Published By : ನಿತಿನ್‌ ಆರ್‌.ಕೈದೊಟ್ಲು 

ಭದ್ರಾವತಿ: ರಸ್ತೆಯಲ್ಲಿ ದಿಢೀರ್‌ ಅಂಡ ಬಂದ ಪ್ರಾಣಿಗೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಬೈಕ್ ಸ್ಕಿಡ್ ಆಗಿ (road accident) ಬಿದ್ದ ಪರಿಣಾಮ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭದ್ರಾವತಿ ತಾಲೂಕು ತಮ್ಮಡಿಹಳ್ಳಿ ಗ್ರಾಮದ ಸಮೀಪ ಘಟನೆ ಸಂಭವಿಸಿದೆ.

ಇದನ್ನೂ ಓದಿ : ಶಿವಮೊಗ್ಗದ ಹಿರಿಯ ಪತ್ರಕರ್ತ, ಕುವೆಂಪು ವಿವಿ ನಿವೃತ್ತ ಪ್ರಾಧ್ಯಾಪಕರಿಗೆ ಮಾದ್ಯಮ ಅಕಾಡೆಮಿ ಪ್ರಶಸ್ತಿ

ಗಾಯಗೊಂಡವರನ್ನು ರಮೇಶ.ವೈ ಎಂದು ಗುರುತಿಸಲಾಗಿದೆ. ಸದ್ಯ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Shivamogga-Police-Jeep

ಶಿವಮೊಗ್ಗದ ಹರ್ಷ ದಿ ಫರ್ನ್‌ ಹೊಟೇಲ್‌ನಲ್ಲಿ ಐಟಿ ಮ್ಯಾನೇಜರ್‌ ಆಗಿರುವ ರಮೇಶ ಅವರು ಕೆಲಸ ಮುಗಿಸಿಕೊಂಡು ರಾತ್ರಿ 7:30ಕ್ಕೆ ಶಂಕರಘಟ್ಟದಲ್ಲಿರುವ ಮನೆಗೆ ಮರಳುತ್ತಿದ್ದರು. ಈ ವೇಳೆ ರಸ್ತೆಗೆ ಪ್ರಾಣಿಯೊಂದು ರಸ್ತೆಗೆ ಅಡ್ಡ ಬಂದಿದ್ದು, ಅದನ್ನು ತಪ್ಪಿಸಲು ಹೋಗಿ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿದೆ. ಬೈಕಿನಿಂದ ಕೆಳಕ್ಕೆ ಬಿದ್ದ ರಮೇಶ್‌ ಅವರ ತಲೆಯ ಎಡಭಾಗಕ್ಕೆ ಜೋರಾಗಿ ಪೆಟ್ಟು ಬಿದ್ದಿದ್ದು, ಕಿವಿಯಿಂದ ರಕ್ತಸ್ರಾವವಾಗಿ ಪ್ರಜ್ಞೆ ತಪ್ಪಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 17, 2026

Leave a Comment