ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | 11 ಮೇ 2019
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಭದ್ರಾವತಿಯ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ (VISL), ಮತ್ತೊಮ್ಮೆ ಕೇಂದ್ರದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಕೇಂದ್ರ ಉಕ್ಕು ಪ್ರಾಧಿಕಾರದ ಕಾರ್ಯದರ್ಶಿ ಬಿನಯ್ ಕುಮಾರ್, ಜಂಟಿ ಕಾರ್ಯದರ್ಶಿ ಪುನಿತ್ ಕನ್ಸಲ್, ಸೈಲ್ ಅಧ್ಯಕ್ಷ ಅನಿಲ್ ಕುಮಾರ್ ಚೌಧರಿ ನೇತೃತ್ವದ ತಂಡ VISLಗೆ ಭೇಟಿ ನೀಡಿತ್ತು.
VISL ಆವರಣದಲ್ಲಿರುವ ಸರ್.ಎಂ.ವಿಶ್ವೇಶ್ವರಾಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಅಧಿಕಾರಿಗಳು, ಕಾರ್ಖಾನೆಯ ವಿವಿಧೆಡೆ ಪರಿಶೀಲನೆ ನಡೆಸಿದರು. ಬ್ಲಾಸ್ಟ್ ಫರ್ನೇಸ್, ಸ್ಟೀಲ್ ಮೇಕಿಂಗ್ ಶಾಪ್, ಮಿಲಸ್ಸ್, ಫೋರ್ಜ್ ಪ್ಲಾಂಟ್, ಮಿಶಿನ್ ಶಾಪ್’ಗಳಿಗೆ ಭೇಟಿ ನೀಡಿದರು.
ಸರ್.ಎಂ.ವಿಶ್ವೇಶ್ವರಾಯ ಮ್ಯೂಸಿಯಂ, ಆಸ್ಪತ್ರೆ, ಹೆಲಿಪ್ಯಾಡ್ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೂ ಅಧಿಕಾರಿ ಭೇಟಿ ನೀಡಿ, ಪರಿಶೀಲಿಸಿದರು. ಆ ಬಳಿಕ, ಕಾರ್ಖಾನೆಯ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಯಿತು. VISLನ ಅಧಿಕಾರಿಗಳು, ಕಾರ್ಮಿಕರು ಮತ್ತು ಗುತ್ತಿಗೆ ಕಾರ್ಮಿಕರ ಸಂಘಟನೆ ಜೊತೆಗೂ ಕೇಂದ್ರದ ಅಧಿಕಾರಿಗಳು ಸಮಾಲೋಚನೆ ನಡೆಸಿದರು.
ಕೇಂದ್ರದ ಅಧಿಕಾರಿಗಳ ತಂಡ VISLಗೆ ಭೇಟಿ ನೀಡಿರುವುದು, ಕಾರ್ಮಿಕರಲ್ಲಿ ಭರವಸೆ ಮೂಡಿಸಿದೆ. ಬಂಡವಾಳ ಹಿಂತೆಗೆತದಿಂದ ಮತ್ತು ಕಾರ್ಖಾನೆ ಪುನಾರಂಭವಾಗಬಹುದು ಎಂಬ ನಿರೀಕ್ಷೆ ಮೂಡಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]