ಭದ್ರಾವತಿ ಬಸ್ ನಿಲ್ದಾಣಕ್ಕೆ ಅಪ್ಪಾಜಿ ಹೆಸರಿಡುವಂತೆ ಸತ್ಯಾಗ್ರಹ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 15 ಸೆಪ್ಟಂಬರ್ 2020

ಭದ್ರಾವತಿಯ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ಹೆಸರಿಡಬೇಕು ಎಂದು ಆಗ್ರಹಿಸಿ, ಮಾನವ ಹಕ್ಕುಗಳ ಹೋರಾಟ ಸಮಿತಿ ಸತ್ಯಾಗ್ರಹ ನಡೆಸಿತು.

ಮಾಜಿ ಶಾಸಕ ವೈ.ಎಸ್.ವಿ.ದತ್ತ ನೇತೃತ್ವದಲ್ಲಿ ಸತ್ಯಾಗ್ರಹ ನಡೆಸಲಾಯಿತು. ಈ ವೇಳೆ ಮಾತನಾಡಿದ ವೈ.ಎಸ್.ವಿ.ದತ್ತ, ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಅಪ್ಪಾಜಿಗೌಡ ಅವರ ಹೆಸರು ಇಡುವುದು ಸೂಕ್ತ. ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಎಂ.ಜೆ.ಅಪ್ಪಾಜಿ ಬಸ್ ನಿಲ್ದಾಣ ಎಂಬ ನಾಮಫಲಕ ಅನಾವರಣಗೊಳ್ಳುವುದರಲ್ಲಿ ಅನುಮಾನ ಬೇಡ. ಇದಕ್ಕೆ ಸಂಸದರು, ಸಚಿವರು, ಶಾಸಕರು ಎಂದು ಬೆಂಬಲಿಸಲಿದ್ದಾರೆ ಎಂಬ ನಂಬಿಕೆ ಇದೆ ಎಂದರು ತಿಳಿಸಿದರು.

ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್.ರಾಜು, ಕಾರ್ಯಾಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ಬ್ರಹ್ಮಲಿಂಗಯ್ಯ, ಜೆಡಿಎಸ್ ಅಧ್ಯಕ್ಷ ಕರುಣಾಮೂರ್ತಿ ಸೇರಿದಂತೆ ಹಲವರು ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.

Kalleshwara-Enterprises.webp

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment