ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಳೆಹೊನ್ನೂರು: ರಾಷ್ಟ್ರದ ಪ್ರತಿ ಮೂಲೆಗೂ ಬ್ಯಾಂಕಿಂಗ್ ಸೇವೆ ಒದಗಿಸಲು ಭಾರತೀಯ ಸ್ಟೇಟ್ ಬ್ಯಾಂಕ್ (SBI) ಎಲ್ಲೆಡೆ ಶಾಖೆ ತೆರೆದು ಜನರ ಆರ್ಥಿಕ ಪ್ರಗತಿಗೆ ಶ್ರಮಿಸುತ್ತಿದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ನ ಬೆಂಗಳೂರು ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಜೂಹಿ ಸ್ಮಿತಾ ಸಿನ್ಹಾ ಹೇಳಿದರು.
ಹೊಳೆಹೊನ್ನೂರು ಪಟ್ಟಣದಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ನ ನೂತನ ಶಾಖೆ ಉದ್ಘಾಟಿಸಿ ಮಾತನಾಡಿದರು.
ಭಾರತವು ಆರ್ಥಿಕವಾಗಿ ಪ್ರಗತಿ ಹೊಂದುತ್ತಿರುವ ದೇಶವಾಗಿದೆ. ಗ್ರಾಮೀಣ ಜನರ ಜೀವನ ಸ್ಥಿತಿ ಇನ್ನಷ್ಟು ಉತ್ತಮ ಆಗಬೇಕಿದೆ. ಅದಕ್ಕಾಗಿ ಎಲ್ಲ ವರ್ಗದ ಜನರಿಗೆ ಬ್ಯಾಂಕ್ ಮೂಲಕ ಅನೇಕ ರೀತಿಯ ಸಾಲ ಸೌಲಭ್ಯ, ಉಳಿತಾಯ, ಠೇವಣಿ ಬಗ್ಗೆ ಜಾಗೃತಿ ಮೂಡಿಸಿ ಪ್ರಗತಿಗೆ ಸಹಕರಿಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಮಂಗಳೂರಿನ ಉಪ ಪ್ರಧಾನ ವ್ಯವಸ್ಥಾಪಕ ಕೃಷ್ಣ ಮೋಹನ ಮುಚರ್ಲ, ಶಿವಮೊಗ್ಗದ ಪ್ರಾದೇಶಿಕ ವ್ಯವಸ್ಥಾಪಕ ಮಧುಗುಲ ವಿಜಯ ಸಾಯಿ, ಶಾಖಾ ವ್ಯವಸ್ಥಾಪಕ ಸುರೇಶ್ ನಾಯ್ಕ, ಸಿಬ್ಬಂದಿ ಎಂ.ಎನ್.ಗುರುರಾಜ್, ರವಿಕಿರಣ ಬೈಟೆ, ಶ್ರೀನಾಥ್ ರೆಡ್ಡಿ, ಪುಷ್ಪಲತಾ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ‘ವರಿಷ್ಠರ ಭೇಟಿಗೆ ದೆಹಲಿಗೆ ತೆರಳುವೆ’, ಸಚಿವ ಸ್ಥಾನದ ಬಗ್ಗೆ ಸಾಗರ ಎಂಎಲ್ಎ ಏನಂದ್ರು?
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





