ಹೊಳೆಹೊನ್ನೂರಿನಲ್ಲಿ SBI ಬ್ಯಾಂಕ್‌ ಶಾಖೆ ಆರಂಭ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

ಹೊಳೆಹೊನ್ನೂರು: ರಾಷ್ಟ್ರದ ಪ್ರತಿ ಮೂಲೆಗೂ ಬ್ಯಾಂಕಿಂಗ್ ಸೇವೆ ಒದಗಿಸಲು ಭಾರತೀಯ ಸ್ಟೇಟ್ ಬ್ಯಾಂಕ್ (SBI) ಎಲ್ಲೆಡೆ ಶಾಖೆ ತೆರೆದು ಜನರ ಆರ್ಥಿಕ ಪ್ರಗತಿಗೆ ಶ್ರಮಿಸುತ್ತಿದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್‌ನ ಬೆಂಗಳೂರು ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಜೂಹಿ ಸ್ಮಿತಾ ಸಿನ್ಹಾ ಹೇಳಿದರು.

ಹೊಳೆಹೊನ್ನೂರು ಪಟ್ಟಣದಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್‌ನ ನೂತನ ಶಾಖೆ ಉದ್ಘಾಟಿಸಿ ಮಾತನಾಡಿದರು.

ಭಾರತವು ಆರ್ಥಿಕವಾಗಿ ಪ್ರಗತಿ ಹೊಂದುತ್ತಿರುವ ದೇಶವಾಗಿದೆ. ಗ್ರಾಮೀಣ ಜನರ ಜೀವನ ಸ್ಥಿತಿ ಇನ್ನಷ್ಟು ಉತ್ತಮ ಆಗಬೇಕಿದೆ. ಅದಕ್ಕಾಗಿ ಎಲ್ಲ ವರ್ಗದ ಜನರಿಗೆ ಬ್ಯಾಂಕ್‌ ಮೂಲಕ ಅನೇಕ ರೀತಿಯ ಸಾಲ ಸೌಲಭ್ಯ, ಉಳಿತಾಯ, ಠೇವಣಿ ಬಗ್ಗೆ ಜಾಗೃತಿ ಮೂಡಿಸಿ ಪ್ರಗತಿಗೆ ಸಹಕರಿಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

Holehonnuru-SBI-Bank-branch-inaugurated

ಮಂಗಳೂರಿನ ಉಪ ಪ್ರಧಾನ ವ್ಯವಸ್ಥಾಪಕ ಕೃಷ್ಣ ಮೋಹನ ಮುಚರ್ಲ, ಶಿವಮೊಗ್ಗದ ಪ್ರಾದೇಶಿಕ ವ್ಯವಸ್ಥಾಪಕ ಮಧುಗುಲ ವಿಜಯ ಸಾಯಿ, ಶಾಖಾ ವ್ಯವಸ್ಥಾಪಕ ಸುರೇಶ್ ನಾಯ್ಕ, ಸಿಬ್ಬಂದಿ ಎಂ.ಎನ್.ಗುರುರಾಜ್, ರವಿಕಿರಣ ಬೈಟೆ, ಶ್ರೀನಾಥ್ ರೆಡ್ಡಿ, ಪುಷ್ಪಲತಾ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ » ‘ವರಿಷ್ಠರ ಭೇಟಿಗೆ ದೆಹಲಿಗೆ ತೆರಳುವೆ’, ಸಚಿವ ಸ್ಥಾನದ ಬಗ್ಗೆ ಸಾಗರ ಎಂಎಲ್‌ಎ ಏನಂದ್ರು?

Leave a Comment