ಭದ್ರಾವತಿಯಲ್ಲಿ ಪೊಲೀಸರಿಂದ ಪಥ ಸಂಚಲನ, ಜಿಲ್ಲೆಯ ವಿವಿಧೆಡೆ ಖುದ್ದು ಭೇಟಿ ನೀಡಿದ ಎಸ್‌ಪಿ

ಶಿವಮೊಗ್ಗ: ಗಣೇಶ ಚತುರ್ಥಿ ಹಿನ್ನೆಲೆ ಜಿಲ್ಲೆಯಲ್ಲಿ ಪೊಲೀಸ್‌ ಇಲಾಖೆ ಬಂದೋಬಸ್ತ್‌ ಸಿದ್ಧತೆ ಆರಂಭಿಸಿದೆ. ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮಾಡುವ ಸ್ಥಳಗಳಿಗೆ ಜಿಲ್ಲಾ ರಕ್ಷಣಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನೊಂದೆಡೆ, ಭದ್ರಾವತಿಯಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ರೂಟ್‌ ಮಾರ್ಚ್‌ ನಡೆಯಿತು.

ಜಿಲ್ಲಾ ರಕ್ಷಣಾಧಿಕಾರಿ ಭೇಟಿ, ಪರಿಶೀಲನೆ

ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮಾಡುತ್ತಿರುವ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್‌ ಭೇಟಿ ನೀಡಿ ಪರಿಶೀಲಿಸಿದರು. ಸೊರಬ, ಆನವಟ್ಟಿ, ಶಿರಾಳಕೊಪ್ಪ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮಾಡುವ ಸ್ಥಳಗಳಿಗೆ ಭೇಟಿ ನೀಡಿದ್ದರು. ಇದೇ ವೇಳೆ ಬಂದೋಬಸ್ತ್‌ ವ್ಯವಸ್ಥೆ ಕುರಿತು ಆಯಾ ಠಾಣೆಗಳ ಪೊಲೀಸ್‌ ಸಿಬ್ಬಂದಿ ಜೊತೆಗೆ ಚರ್ಚೆ ನಡೆಸಿದರು.

Route-March-at-Bhadravathi-and-SP-Nikhil-Visit-Anavatti-Soraba-and-Shiralakoppa

ಭದ್ರಾವತಿಯಲ್ಲಿ ರೂಟ್‌ ಮಾರ್ಚ್‌

ಇತ್ತ, ಭದ್ರಾವತಿಯಲ್ಲಿ ಪೊಲೀಸ್‌ ಇಲಾಖೆ ಮತ್ತು ವಿಶೇಷ ಕಾರ್ಯಪಡೆ (ಎಸ್‌ಎಎಫ್‌) ಪಥ ಸಂಚಲನ ನಡೆಸಿದರು. ಹಿಂದೂ ಮಹಾಸಭಾ ಗಣಪತಿ ಮೂರ್ತಿಯ ಮೆರವಣಿಗೆ ನಡೆಯುವ ಮಾರ್ಗದಲ್ಲಿ ರೂಟ್‌ ಮಾರ್ಚ್‌ ಸಾಗಿತು. ಪಟ್ಟಣದ ಶಿವಾಜಿ ಸರ್ಕಲ್‌ನಿಂದ ಅಂಡರ್‌ ಬ್ರಿಡ್ಜ್‌ವರೆಗೆ ನಡೆದ ಪಥ ಸಂಚಲನದಲ್ಲಿ ಭದ್ರಾವತಿ ಪಟ್ಟಣ ವ್ಯಾಪ್ತಿಯ ಪೊಲೀಸರು, ಎಸ್‌ಎಎಫ್‌ ಸಿಬ್ಬಂದಿ ಪಾಲ್ಗೊಂಡಿದ್ದರು.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ