ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 JANUARY 2024
BHADRAVATHI : ಆಕಸ್ಮಿಕ ಬೆಂಕಿಗೆ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಹೋಗಿವೆ. ಭದ್ರಾವತಿ ಪಟ್ಟಣದ ಹಳದಮ್ಮ ಬೀದಿಯಲ್ಲಿ ಘಟನೆ ಸಂಭವಿಸಿದೆ. ಶಾರ್ಟ್ ಸರ್ಕಿಟ್‌ನಿಂದಾಗಿ ಬೆಂಕಿ ಹೊತ್ತುಕೊಂಡಿರಬಹುದು ಎಂದು ಶಂಕಿಸಲಾಗಿದೆ.
ವಾಸು ಎಂಬುವವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಹಾನಿಯಾಗಿವೆ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.
ಇದನ್ನೂ ಓದಿ – ವೀಲಿಂಗ್ ಮಾಡಿದವರಿಗೆ ಮತ್ತೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಪೊಲೀಸ್, ಇಬ್ಬರಿಗೆ ಬಿತ್ತು ಭಾರಿ ದಂಡ
ನಾವು ಕೆಲಸಕ್ಕೆ ಹೋಗಿದ್ದಾಗ ಫೋನ್ ಬಂತು. ಇಲ್ಲಿ ಬಂದಾಗ ಮನೆ ಹೊತ್ತಿ ಉರಿಯುತ್ತಿತ್ತು. ಕೂಡಲೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದೆವು. ಮನೆಯಲ್ಲಿರುವ ವಸ್ತುಗಳು, ಜಮೀನು ಮಾರಿದ್ದ ಹಣ, ಒಡವೆ ಎಲ್ಲವು ಸುಟ್ಟು ಹೋಗಿದೆ ಎಂದು ಮನೆ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422