ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 19 DECEMBER 2024
ಭದ್ರಾವತಿ : ರೈಸ್ ಮಿಲ್‌ನಲ್ಲಿ ಬಾಯ್ಲರ್ ಸ್ಪೋಟ ಪ್ರಕರಣ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮೊದಲ ಪ್ರತಿಕ್ರಿಯೆ (First Reaction) ನೀಡಿದ್ದಾರೆ.
ರಕ್ಷಣಾಧಿಕಾರಿ ಹೇಳಿದ್ದೇನು?
ವಾಟ್ಸಪ್ ಮೂಲಕ ಮಾಧ್ಯಮಗಳಿಗೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.
ಭದ್ರಾವತಿ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಯ್ಲರ್ ಸ್ಫೋಟ ಸಂಭವಿಸಿದೆ. 7 ಮಂದಿ ಗಾಯಗೊಂಡಿದ್ದು, ಎಲ್ಲರು ಅಪಾಯದಿಂದ ಪಾರಾಗಿದ್ದಾರೆ. ಎಲ್ಲರಿಗು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಘು ಎಂಬಾತ ನಾಪತ್ತೆಯಾಗಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಅಗ್ನಿಶಾಮಕ ಸಿಬ್ಬಂದಿ, ಆಂಬುಲೆನ್ಸ್, ಮೆಸ್ಕಾಂ, ನಗರಸಭೆ, ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಬೃಹತ್ ಕಾರು ಎಕ್ಸ್‌ಚೇಂಜ್ ಮೇಳ
ಇದನ್ನೂ ಓದಿ » ಗೋಪಿ ಸರ್ಕಲ್‌ನಲ್ಲಿ ಅಮಿತ್ ಷಾ ಫೋಟೊಗೆ ಪೊರಕೆ ಏಟು, ಬೆಂಕಿ ಹಚ್ಚಿ ಆಕ್ರೋಶ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422