ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 SEPTEMBER 2023
HOLEHONNURU : ಶಾಲಾ ವಾಹನದಿಂದ ಕೆಳಗಿಳಿದು ಮನೆ ಕಡೆಗೆ ತೆರಳುತ್ತಿದ್ದ ಬಾಲಕಿ ಮೇಲೆ ಹುಚ್ಚು ನಾಯಿ ದಾಳಿ (STRAY DOG) ಮಾಡಿದೆ. ಗಂಭೀರ ಗಾಯಗೊಂಡಿದ್ದ ಬಾಲಕಿಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೊಳೆಹೊನ್ನೂರು ಸಮೀಪದ ಬಿ. ಬೀರನಹಳ್ಳಿ ಗ್ರಾಮ ಪಂಚಾಯಿತ ವ್ಯಾಪ್ತಿಯ ಹೊಳೆಬೆಳಗಲು (Holebelagalu) ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಬೇಬಿ (6) ಗಾಯಗೊಂಡಿದ್ದಾಳೆ. ಶಾಲೆಯಿಂದ ಮನೆಗೆ ಮರಳುವಾಗ ಹುಚ್ಚು ನಾಯಿ ದಾಳಿ ಮಾಡಿದೆ.
ಕಳೆದ ಎರಡ್ಮೂರು ದಿನದಿಂದ ಗ್ರಾಮದಲ್ಲಿ ಹುಚ್ಚು ನಾಯಿಯ ಉಪಟಳ ಹೆಚ್ಚಾಗಿದೆ. ಗ್ರಾಮದ ನಾಲ್ಕೈದು ಜನರ ಮೇಲೆ ನಾಯಿ ದಾಳಿ (STRAY DOG) ಮಾಡಿದೆ. ಗಾಯಾಳುಗಳು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ರಸ್ತೆ ಬದಿ ಕಟ್ಟಿ ಹಾಕಿದ್ದ ಹಸುವೊಂದರ ಮೂಲೂ ಹುಚ್ಚು ನಾಯಿ ದಾಳಿ ಮಾಡಿದೆ.
ಇದನ್ನೂ ಓದಿ – ವಿದ್ಯಾರ್ಥಿ ಬ್ಯಾಗಿನಲ್ಲಿ ನಾಗರ ಹಾವು, ಸಹಪಾಠಿ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿತು
ನಾಯಿ ದಾಳಿಯಿಂದಾಗಿ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ. ಮನೆಯಿಂದ ಹೊರಗೆ ಬರಲು ಹೆದರುವಂತಾಗಿದೆ. ಮಕ್ಕಳನ್ನು ಮನೆಯಿಂದ ಹೊರಗೆ ಕಳುಹಿಸಲು ಪೋಷಕರು ಭಯ ಪಡುತ್ತಿದ್ದಾರೆ.
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು
















