SHIVAMOGGA LIVE | 7 JULY 2023
SHANKARAGHATTA : ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಅಕ್ರಮದ ತನಿಖೆ, ವಿದ್ಯಾರ್ಥಿ ವೇತನ ಬಿಡುಗಡೆಯಾಗದಿರುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎನ್ಎಸ್ಯುಐ ಸಂಘಟನೆ ನೇತೃತ್ವದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಪ್ರತಿಭಟನೆ (Protest) ನಡೆಸಿದರು.
ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲದಯ ಆಡಳಿತ ಭವನದ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ (Protest) ನಡೆಸಿದರು.
ವಿದ್ಯಾರ್ಥಿಗಳ ಡಿಮಾಂಡ್ ಏನು?
ಅತಿಥಿ ಉಪನ್ಯಾಸಕರ ನೇಮಕಾತಿ ವೇಳೆ ನಿಯಮಗಳನ್ನು ಗಾಳಿಗೆ ತೂರಲಾಗಿದ್ದು, ತನಿಖೆ ನಡೆಸಬೇಕು. ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು. ವಿವಿ ವ್ಯಾಪ್ತಿಯ ಎಲ್ಲಾ ಕಾಲೇಜುಗಳಲ್ಲಿ ಕಂಪ್ಯೂಟರ್ ಲ್ಯಾಬ್ ವ್ಯವಸ್ಥೆ ಆಗಬೇಕು. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕಾಲೇಜುಗಳಲ್ಲಿ ಕೊಠಡಿಗಳ ಸಂಖ್ಯೆ ಹೆಚ್ಚಿಸಬೇಕು. ಭ್ರಷ್ಟಾಚಾರ ಆರೋಪ ಹೊತ್ತಿರುವ ಅಧಿಕಾರಿಗಳನ್ನು ಕುವೆಂಪು ವಿವಿಯಿಂದ ಬಿಡುಗಡೆ ಮಾಡಬೇಕು. ಕಾಲೇಜುಗಳಲ್ಲಿ ಸ್ಥಗಿತವಾಗಿರುವ ಸಾಂಸ್ಕೃತಿಕ ಕಾರ್ಯಕ್ರಮ, ಸ್ಪರ್ಧೆಗಳನ್ನು ಪುನಾರಂಭ ಮಾಡಬೇಕು. ಹೊಸ ಶಿಕ್ಷಣ ನೀತಿ ನೆಪವೊಡ್ಡಿ ಹೆಚ್ಚಳ ಮಾಡಿದ್ದ ಪರೀಕ್ಷಾ ಶುಲ್ಕ, ಪ್ರವೇಶ ಶುಲ್ಕವನ್ನು ಮರುಪಾವತಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಮನವಿ ಕೊಟ್ಟರು ಪ್ರಯೋಜನವಾಗಿಲ್ಲ
ಇನ್ನು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತ್ಯೇಕವಾಗಿ ಪ್ರತಿಭಟನೆಗಳನ್ನು ನಡೆಸಿ, ಮನವಿ ಸಲ್ಲಿಸಿದ್ದರು ಪ್ರಯೋಜವಾಗಿಲ್ಲ. ಇದೆ ಪರಿಸ್ಥಿತಿ ಮುಂದುವರೆದರೆ ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಇನ್ನಷ್ಟು ಪ್ರತಿಭಟನೆಗಳನ್ನು ಎದುರಿಸಬೇಕಾಗುತ್ತದೆ ಎಂದು ಎನ್ಎಸ್ಯುಐ ಮುಖಂಡರು ಎಚ್ಚರಿಸಿದರು.
ಕುಲಪತಿಗೆ ಮುತ್ತಿಗೆ ಯತ್ನ
ಕುವೆಂಪು ಶತಮಾನೋತ್ಸವ ಭವನದ ಮುಂಭಾಗ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಆಗಮಿಸಿದರು. ಕುಲಪತಿ ಅವರನ್ನು ಮುತ್ತಿಗೆ ಹಾಕಲು ವಿದ್ಯಾರ್ಥಿಗಳು ಮುಂದಾದರು. ಆಗ ನೂಕಾಟ ತಾಳ್ಳಾಟ ಸಂಭವಿಸಿತು. ಪೊಲೀಸರು, ಎನ್ಎಸ್ಯುಐ ಸಂಘಟನೆ ಕಾರ್ಯಕರ್ತರು ಪರಿಸ್ಥಿತಿ ತಿಳಿಗೊಳಿಸಿದರು.
ಇದನ್ನೂ ಓದಿ – ಶಂಕರಘಟ್ಟದಲ್ಲಿ ಮಳೆಯಲ್ಲು ವಿದ್ಯಾರ್ಥಿಗಳ ಪ್ರತಿಭಟನಾ ಮೆರವಣಿಗೆ, 2 ಬೇಡಿಕೆ ಈಡೇರಿಸುವಂತೆ ಪಟ್ಟು
ಎನ್ಎಸ್ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ, ಜಿಲ್ಲಾಧ್ಯಕ್ಷ ವಿಜಯ್ ಕುಮಾರ್, ಕಾಂಗ್ರೆಸ್ ಯುವ ಮುಖಂಡರಾದ ಮುರುಗೇಶ್, ರವಿಕುಮಾರ್, ಹರ್ಷಿತ್, ರವಿ ಕಾಟಿಕೆರೆ, ಧವನ್ ರಾಜ್, ನಿಸಾರ್, ಸಾಗರ್ ಕಂಡ್ರೆ, ಭಾಷಾ, ಚರಣ, ಚೇತನ್, ಮಧು ಸೂದನ್ ಸೇರಿದಂತೆ ಹಲವರು ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200