ಶಂಕರಘಟ್ಟದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಯತ್ನ, ಕುವೆಂಪು ವಿವಿಯಲ್ಲಿ ತರಗತಿ ಬಹಿಷ್ಕಾರ, ಮೆರವಣಿಗೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 11 JULY 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHANKARAGHATTA : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳು (Students) ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ಎಲ್ಲಾ ವಿಭಾಗದ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು. ಆಡಳಿತ ಭವನದ ಮುಂಭಾಗ ಧರಣಿ ನಡೆಸಿದರು.

ಆತ್ಮಹತ್ಯೆ ಯತ್ನದ ಬೆನ್ನಿಗೆ ಹೋರಾಟ

ಕುವೆಂಪು ವಿವಿಯಲ್ಲಿನ ಹಗರಣಗಳಿಂದ ಮನನೊಂದು ವಿದ್ಯಾರ್ಥಿಯೊಬ್ಬ (ಕುಟುಂಬದವರ ಮನವಿ ಮೇರಗೆ ಹೆಸರು, ಊರು ಪ್ರಕಟಿಸುತ್ತಿಲ್ಲ) ಬುಧವಾರ ಆತ್ಮಹತ್ಯೆಗೆ ಯತ್ನಿಸಿದ್ದ. ಇದರ ಬೆನ್ನಿಗೆ ಆಕ್ರೋಶಗೊಂಡ ವಿದ್ಯಾರ್ಥಿಗಳು ಇವತ್ತು ಬೆಳಗ್ಗೆ ತರಗತಿ ಬಹಿಷ್ಕರಿಸಿ ಹೋರಾಟ ನಡೆಸಿದರು.

Kuvempu-University-Students-Protest

ವಿದ್ಯಾರ್ಥಿಗಳ ಬೇಡಿಕೆ ಏನು?

ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಯಾಗಿಲ್ಲ, ಫಲಿತಾಂಶ ವಿಳಂಬ ಮಾಡಲಾಗುತ್ತಿದೆ, ಸಹ್ಯಾದ್ರಿ ಉತ್ಸವ ಸೇರಿದಂತೆ ಯಾವುದೇ ಸಾಂಸ್ಕೃತಿಕ ಮತ್ತು ಕ್ರೀಡಾ ಚುಟುವಟಿಕೆ ನಡೆಸುತ್ತಿಲ್ಲ, ವಿವಿ ಹಾಸ್ಟೆಲ್‌ ಅವ್ಯವಸ್ಥೆ, ತರಗತಿ ಕೊಠಡಿಗಳು ಸೋರುತ್ತಿವೆ, ಅಂಕಪಟ್ಟಿ ಮತ್ತು ಪ್ರಮಾಣಪತ್ರ ನೀಡುವಲ್ಲಿ ವಿಳಂಬ, ಪರೀಕ್ಷಾ ಶುಲ್ಕ, ವಿವಿಯಲ್ಲಿ ಬೀದಿ ದೀಪಗಳ ಅವ್ಯವಸ್ಥೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

Kuvempu University Students Protest

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕುವೆಂಪು ವಿವಿ ರಿಜಿಸ್ಟ್ರಾರ್‌ ಸೇರಿದಂತೆ ಅಧಿಕಾರಿಗಳು ವಿದ್ಯಾರ್ಥಿಗಳ ಬೇಡಿಕೆ ಈಡೇರಿಸುವ ಭರವಸೆ ನೀಡಿದರು.

ಇದನ್ನೂ ಓದಿ – ಶಿವಮೊಗ್ಗಕ್ಕೆ ಇವತ್ತು ಇಬ್ಬರು ಸಚಿವರ ಭೇಟಿ, ಮಹತ್ವದ ಮೀಟಿಂಗ್‌

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment