SHIVAMOGGA LIVE NEWS | 11 JULY 2024
SHANKARAGHATTA : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳು (Students) ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಎಲ್ಲಾ ವಿಭಾಗದ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು. ಆಡಳಿತ ಭವನದ ಮುಂಭಾಗ ಧರಣಿ ನಡೆಸಿದರು.
ಆತ್ಮಹತ್ಯೆ ಯತ್ನದ ಬೆನ್ನಿಗೆ ಹೋರಾಟ
ಕುವೆಂಪು ವಿವಿಯಲ್ಲಿನ ಹಗರಣಗಳಿಂದ ಮನನೊಂದು ವಿದ್ಯಾರ್ಥಿಯೊಬ್ಬ (ಕುಟುಂಬದವರ ಮನವಿ ಮೇರಗೆ ಹೆಸರು, ಊರು ಪ್ರಕಟಿಸುತ್ತಿಲ್ಲ) ಬುಧವಾರ ಆತ್ಮಹತ್ಯೆಗೆ ಯತ್ನಿಸಿದ್ದ. ಇದರ ಬೆನ್ನಿಗೆ ಆಕ್ರೋಶಗೊಂಡ ವಿದ್ಯಾರ್ಥಿಗಳು ಇವತ್ತು ಬೆಳಗ್ಗೆ ತರಗತಿ ಬಹಿಷ್ಕರಿಸಿ ಹೋರಾಟ ನಡೆಸಿದರು.
ವಿದ್ಯಾರ್ಥಿಗಳ ಬೇಡಿಕೆ ಏನು?
ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಯಾಗಿಲ್ಲ, ಫಲಿತಾಂಶ ವಿಳಂಬ ಮಾಡಲಾಗುತ್ತಿದೆ, ಸಹ್ಯಾದ್ರಿ ಉತ್ಸವ ಸೇರಿದಂತೆ ಯಾವುದೇ ಸಾಂಸ್ಕೃತಿಕ ಮತ್ತು ಕ್ರೀಡಾ ಚುಟುವಟಿಕೆ ನಡೆಸುತ್ತಿಲ್ಲ, ವಿವಿ ಹಾಸ್ಟೆಲ್ ಅವ್ಯವಸ್ಥೆ, ತರಗತಿ ಕೊಠಡಿಗಳು ಸೋರುತ್ತಿವೆ, ಅಂಕಪಟ್ಟಿ ಮತ್ತು ಪ್ರಮಾಣಪತ್ರ ನೀಡುವಲ್ಲಿ ವಿಳಂಬ, ಪರೀಕ್ಷಾ ಶುಲ್ಕ, ವಿವಿಯಲ್ಲಿ ಬೀದಿ ದೀಪಗಳ ಅವ್ಯವಸ್ಥೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕುವೆಂಪು ವಿವಿ ರಿಜಿಸ್ಟ್ರಾರ್ ಸೇರಿದಂತೆ ಅಧಿಕಾರಿಗಳು ವಿದ್ಯಾರ್ಥಿಗಳ ಬೇಡಿಕೆ ಈಡೇರಿಸುವ ಭರವಸೆ ನೀಡಿದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ ಇವತ್ತು ಇಬ್ಬರು ಸಚಿವರ ಭೇಟಿ, ಮಹತ್ವದ ಮೀಟಿಂಗ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200