SHIVAMOGGA LIVE | 6 JULY 2023
SHANKARAGHATTA : ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳು (Students) ಪ್ರತಿಭಟನೆ ನಡೆಸಿದರು. ತರಗತಿಗಳನ್ನು ಬಹಿಷ್ಕರಿಸಿ ಸುರಿವ ಮಳೆಯನ್ನು ಲೆಕ್ಕಿಸದೆ ಮೆರವಣಿಗೆ ನಡೆಸಿದರು.
ವಿದ್ಯಾರ್ಥಿಗಳದ್ದು ಎರಡು ಬೇಡಿಕೆ
ಬೇಡಿಕೆ 1 : ವಿದ್ಯಾರ್ಥಿ ವೇತನದ ವ್ಯವಸ್ಥೆಯಲ್ಲಿ ಹಲವು ದೋಷಗಳಾಗಿವೆ. ದ್ವಿತೀಯ ವರ್ಷದ ವಿದ್ಯಾರ್ಥಿಗಳ ಫಲಿತಾಂಶವನ್ನು ಯುಯುಸಿಎಂಎಸ್ ವಿಳಂಬ ಮಾಡಿದೆ. ಇದೆ ಕಾರಣಕ್ಕೆ ತಾಂತ್ರಿಕ ದೋಷದಿಂದಾಗಿ ಪ್ರಥಮ ವರ್ಷದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನದಲ್ಲಿ ತಾಂತ್ರಿಕ ದೋಷ ಉಂಟಾಗಿದೆ. ಇದನ್ನು ಕೂಡಲೆ ಪರಿಹರಿಸಬೇಕು ಎಂದು ವಿದ್ಯಾರ್ಥಿಗಳು (Students) ಆಗ್ರಹಿಸಿದರು.
ಇದನ್ನೂ ಓದಿ – ಗಾಜನೂರು ಜಲಾಶಯದ ಗೇಟ್ ಓಪನ್, ಹೊಳೆಗೆ ಹೆಚ್ಚುವರಿ ನೀರು
ಬೇಡಿಕೆ 2 : ಸೆಮಿಸ್ಟರ್ ಪರೀಕ್ಷೆ ಶುಲ್ಕ ದುಬಾರಿಯಾಗಿದೆ. ಇದನ್ನು ಕಡಿಮೆ ಮಾಡಿ, ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಹೊರೆಯನ್ನು ತಗ್ಗಿಸಬೇಕು ಎಂದು ಆಗ್ರಹಿಸಿದರು.
ಜೋರು ಮಳೆ ಲೆಕ್ಕಿಸಿದೆ ಮರೆವಣಿಗೆ
ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ವಿದ್ಯಾರ್ಥಿಗಳು ಜ್ಞಾನ ಸಹ್ಯಾದ್ರಿ ಆವರಣದಲ್ಲಿ ಮೆರವಣಿಗೆ ನಡೆಸಿದರು. ತರಗತಿಗಳನ್ನು ಬಹಿಷ್ಕರಿಸಿ ಆಡಳಿತ ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿ ವಿದ್ಯಾರ್ಥಿಗಳು ತಮ್ಮ ಬೇಡಿಕೆ ಈಡೇರಿಸುವಂತೆ ಪಟ್ಟು ಹಿಡಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200