ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | BHADRAVATHI | 23 ಜನವರಿ 2020
ಸಮಾಜ ಕಲ್ಯಾಣ ಇಲಾಖೆಯ ನೂತನ ಕಟ್ಟಡ ಉದ್ಘಾಟನೆ ಆಹ್ವಾನ ಪತ್ರಿಕೆಯಲ್ಲಿ ಸದಸ್ಯರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ತಾಪಂ ಸ್ಥಾಯಿ ಸಮಿತಿ ಸದಸ್ಯರು ಆಶಾ ಶ್ರೀಧರ್ ನೇತೃತ್ವದಲ್ಲಿ ಸಭೆಯಿಂದ ಹೊರ ನಡೆದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದೂದ್‌ಪೀರ್ ಜ.27ರಂದು ನಿಗದಿಪಡಿಸಿರುವ ಕಟ್ಟಡ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಕೊಟ್ಟಾಗ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.
ಈ ವೇಳೆ ಮಧ್ಯಪ್ರವೇಶಿಸಿ ಮಾತನಾಡಲು ಮುಂದಾದ ದೂದ್‌ಪೀರ್ ಜತೆ ಸದಸ್ಯರು ಮಾತಿನ ಚಕಮಕಿ ನಡೆಸಿದರು. ಆಗ ಆಶಾ ಶ್ರೀಧರ್ ಜತೆ ಸದಸ್ಯರು ಸಭೆ ಬಹಿಷ್ಕರಿಸಿ ಹೊರನಡೆದರು. ಸಮಾಜ ಕಲ್ಯಾಣ ಇಲಾಖೆ ಕಟ್ಟಡ ಉದ್ಘಾಟನೆಗೆ ಸಂಬಂಧ ಮುದ್ರಿಸಿರುವ ಆಹ್ವಾನ ಪತ್ರಿಕೆ ಡಿಸಿ ಕಚೇರಿ ಸೂಚನೆ ಮೇರೆಗೆ ಸಿದ್ದವಾಗಿದೆ. ಇದರಲ್ಲಿ ಲೋಪವಾಗಿಲ್ಲ ಎಂದು ದೂದ್‌ಪೀರ್ ಸ್ಪಷ್ಟಪಡಿಸಿದರು. ಇಲಾಖೆಯ ಮತ್ತೊಬ್ಬ ಅಧಿಕಾರಿ ಕೃಷ್ಣಪ್ಪ ಆಗಮಿಸಿ ಆಹ್ವಾನ ಪತ್ರಿಕೆ ಕುರಿತಾಗಿನ ಗೊಂದಲ ನಿವಾರಿಸುವ ಪ್ರಯತ್ನ ಮಾಡಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
Bhadravathi Taluk Panchayath Meeting witnessed the verbal spat over an invitation.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422