BREAKING NEWS – ಭದ್ರಾವತಿಯಲ್ಲಿ ಶಿಕ್ಷಕಿ ಸೇರಿ ಇಬ್ಬರಿಗೆ ಮರಣದಂಡನೆ, ಏನಿದು ಪ್ರಕರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ಸರ್ಕಾರಿ ಶಾಲೆ ಶಿಕ್ಷಕರೊಬ್ಬರನ್ನು (Teacher) ಕ್ರೂರವಾಗಿ ಹತ್ಯೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆ ಅವರ ಪತ್ನಿ ಸೇರಿ ಇಬ್ಬರಿಗೆ ಮರಣದಂಡನೆ (Death Sentence) ವಿಧಿಸಿ ಭದ್ರಾವತಿಯ ನಾಲ್ಕನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಆದೇಶಿಸಿದೆ.

ನಾಲ್ಕನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚಿಟ್ಟಿಯಾರ ಅವರು ಇಂದು ತೀರ್ಪು ಪ್ರಕಟಿಸಿದ್ದಾರೆ.

ಏನಿದು ಪ್ರಕರಣ?

2016ರ ಜುಲೈ 7ರಂದು ಜನ್ನಾಪುರದಲ್ಲಿ ಶಿಕ್ಷಕ ಇಮ್ತಿಯಾಜ್‌ ಎಂಬುವವರನ್ನು ಹತ್ಯೆ ಮಾಡಲಾಗಿತ್ತು. ಅವರ ಮೃತದೇಹವನ್ನು ನೈನಾಲ್‌ ದಾರದಲ್ಲಿ ಕಟ್ಟಿ ಭದ್ರಾವತಿ ಹೊಸ ಸೇತುವೆ ಸಮೀಪ ಭದ್ರಾ ನದಿಯಲ್ಲಿ ಎಸೆಯಲಾಗಿತ್ತು. ತನಿಖೆ ನಡೆಸಿದ ನ್ಯೂಟೌನ್‌ ಠಾಣೆ ಪೊಲೀಸರು ಶಿಕ್ಷಕ ಇಮ್ತಿಯಾಜ್‌ ಪತ್ನಿ ಲಕ್ಷ್ಮಿ, ಆಕೆಯ ಪ್ರಿಯಕರ ಕೃಷ್ಣಮೂರ್ತಿ ಅಲಿಯಾಸ್‌ ಕಿಟ್ಟಿ, ಶಿವರಾಜ್‌ ಅಲಿಯಾಸ್‌ ಶಿವು ಎಂಬುವವರು ಬಂಧಿಸಿದ್ದರು.

New-Town-Police-Station-Bhadravathi

ಅಕ್ರಮ ಸಂಬಂಧದ ಹಿನ್ನೆಲೆ ಕೊಲೆ

ಶಿಕ್ಷಕಿ ಲಕ್ಷ್ಮಿ ಮತ್ತು ಚಾಲಕ ಕೃಷ್ಣಮೂರ್ತಿ ಸಲುಗೆಯಿಂದ ಇದ್ದರು. ಪತಿ ಇಮ್ತಿಯಾಜ್‌ ಇದನ್ನು ವಿರೋಧಿಸಿದ್ದರು. ಇದೇ ಕಾರಣಕ್ಕೆ ಲಕ್ಷ್ಮಿ ಮತ್ತು ಕೃಷ್ಣಮೂರ್ತಿ, ಜನ್ನಾಪುರದ ಮನೆಯಲ್ಲಿ ಇಮ್ತಿಯಾಜ್‌ ತಲೆಗೆ ರಾಡ್‌ ಮತ್ತು ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದರು ಎಂದು ಆರೋಪಿಸಲಾಗಿತ್ತು.

Punishment-for-Bhadravathi-Teacher-BDVT-Court.

ಇದನ್ನೂ ಓದಿ » ಶಿವಮೊಗ್ಗ ಸಿಟಿಯ ಡೇಂಜರಸ್‌ ತಿರುವು, ಸ್ವಲ್ಪ ಮೈಮರೆತರೆ ವಾಹನ ಸವಾರರು ಗ್ಯಾರಂಟಿ ಆಸ್ಪತ್ರೆ ಪಾಲು

ಹತ್ಯೆ ಬಳಿಕ ನೈಲಾನ್‌ ದಾರ, ಬೆಡ್‌ಶೀಟ್‌ನಿಂದ ಮೃತದೇಹವನ್ನು ಸುತ್ತಿ ಇನ್ನೋವಾ ಕಾರಿನಲ್ಲಿ ಕೊಂಡೊಯ್ದು ಭದ್ರಾವತಿ ಹೊಸ ಸೇತುವೆ ಬಳಿ ಭದ್ರಾ ನದಿಗೆ ಎಸೆದಿದ್ದರು. ಮೃತದೇಹ ಸಾಗಿಸಲು ಶಿವರಾಜ್‌ನ ನೆರವು ಪಡೆದಿದ್ದರು ಎಂದು ಆರೋಪಿಸಲಾಗಿತ್ತು.

Punishment-for-Bhadravathi-Teacher-BDVT-Court.

ಆರೋಪ ಸಾಬೀತು, ಗಲ್ಲು ಶಿಕ್ಷೆ

ಪ್ರಕರಣದ ತನಿಖೆ ನಡೆಸಿದ ನ್ಯೂಟೌನ್‌ ಠಾಣೆ ಇನ್ಸ್‌ಪೆಕ್ಟರ್‌ ಚಂದ್ರಶೇಖರ.ಟಿ.ಕೆ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಭದ್ರಾವತಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಕೊಲೆ ಆರೋಪ ಸಾಬೀತಾಗಿದೆ. ಈ ಹಿನ್ನೆಲೆ ಶಿಕ್ಷಕಿ ಲಕ್ಷ್ಮಿ ಮತ್ತು ಕೃಷ್ಣಮೂರ್ತಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಸಾಕ್ಷಿ ನಾಶಕ್ಕೆ ನೆರವಾದ ಶಿವರಾಜ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಇನ್ನು, ಮೃತ ಶಿಕ್ಷಕ ಇಮ್ತಿಯಾಜ್‌ ಅವರ ತಾಯಿಗೆ ₹10 ಲಕ್ಷ ಪರಿಹಾರ ನೀಡುವಂತೆ ಆದೇಶಿಸಲಾಗಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ರತ್ನಮ್ಮ ಅವರು ವಾದ ಮಂಡಿಸಿದ್ದರು.

Teacher gets punishment 

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 23, 2025

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

Leave a Comment