ಭದ್ರಾವತಿ: ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 19 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 59 ಸಹಾಯಕಿಯರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಅಂಗನವಾಡಿ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ.
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಈ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಜೂನ್ 20ರ ಒಳಗಾಗಿ ಸಲ್ಲಿಸಬಹುದಾಗಿದೆ. ಆಯ್ಕೆಯಾಗಿರುವ ಅಭ್ಯರ್ಥಿಗಳು ಜೂನ್ 23ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಮೂಲ ದಾಖಲೆಗಳ ಪರಿಶೀಲನೆಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ (CDPO) ಕಚೇರಿಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


