ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

Published On : ಮಾರ್ಚ್ 19, 2026

Published By : ನಿತಿನ್‌ ಆರ್‌.ಕೈದೊಟ್ಲು 

ಭದ್ರಾವತಿ: ದುಷ್ಕರ್ಮಿಗಳು (miscreants) ಚಾಕು ತೋರಿಸಿ ಪ್ರಾಣ ಬೆದರಿಕೆ ಹಾಕಿ ಇಬ್ಬರು ವಿದ್ಯಾರ್ಥಿಗಳ ಮೊಬೈಲ್ ಫೋನ್‌ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಾದ ತರುಣ್ ಮತ್ತು ಅಭಿನವ್ ಅವರು ವಿಶ್ವೇಶ್ವರಯ್ಯ ನಗರದ ಭದ್ರಾ ನಾಲೆ ಬಳಿ ಇದ್ದಾಗ ಈ ಘಟನೆ ನಡೆದಿದೆ. ಅಲ್ಲಿಗೆ ಬಂದ ಮೂವರು ದುಷ್ಕರ್ಮಿಗಳು ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಅಡ್ಡಗಟ್ಟಿದ್ದಾರೆ. ನಂತರ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವರಿಬ್ಬರ ಬಳಿ ಇದ್ದ ಎರಡು ವಿವೋ ಮೊಬೈಲ್ ಫೋನ್‌ಗಳನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

New-Town-Police-Station-Bhadravathi

ವಿದ್ಯಾರ್ಥಿಗಳು ಮನೆಯಲ್ಲಿ ವಿಷಯ ತಿಳಿಸಿದ ಹಿನ್ನೆಲೆ ಪೋಷಕರು ದೂರು ನೀಡಿದ್ದಾರೆ. ಭದ್ರಾವತಿ ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sunrise Facility Services, Sri sai Trust Shimoga
JNN College of Engineering Admissions started

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 19, 2026

Leave a Comment