ಹೊಳೆಹೊನ್ನೂರು: ಚನ್ನಗಿರಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದ ಅಪಘಾತದಲ್ಲಿ (bike accident) ದಸ್ತಗಿರ್ (32) ಎಂಬುವವರು ಮೃತಪಟ್ಟಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ
ನೃಪತುಂಗ ವೃತ್ತದ ಕಡೆಯಿಂದ ಬೈಕಿನಲ್ಲಿ ಹೋಗುತ್ತಿದ್ದ ದಸ್ತಗಿರ್, ಮುಂದೆ ಸಾಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಬಳಿಕ ಪಕ್ಕದಲ್ಲಿ ಹೋದ ಅಪರಿಚಿತ ವಾಹನಕ್ಕೂ ಡಿಕ್ಕಿ ಹೊಡೆದಿದ್ದು ತೀವ್ರ ರಕ್ತಸ್ರಾವವಾಗಿದ್ದರಿಂದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಇವರಿಗೆ ಪತ್ನಿ, ಪುತ್ರ ಇದ್ದಾರೆ. ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








