ಶಿವಮೊಗ್ಗ ಲೈವ್.ಕಾಂ | 21 ಮೇ 2019
ತಾಳಗುಪ್ಪ ಬೆಂಗಳೂರು ರೈಲಿನ ಎಂಜಿನ್’ನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ರೈಲು ಪ್ರಯಾಣ ಸುಮಾರು ಎರಡೂವರೆ ಗಂಟೆ ವಿಳಂಬವಾಗಿದೆ. ಇನ್ನು ಬೆಂಕಿ ಕಾಣಿಸಿಕೊಂಡ ವಿಚಾರ ತಿಳಿಯುತ್ತಿದ್ದಂತೆ, ಪ್ರಯಾಣಿಕರು ಆತಂಕಕ್ಕೀಡಾಗಿದ್ದರು. | VIDEO REPORT |
![]() |
ನಿನ್ನೆ ರಾತ್ರಿ ರೈಲು ಭದ್ರಾವತಿ ರೈಲ್ವೆ ನಿಲ್ದಾಣಕ್ಕೆ ತಲುಪುತ್ತಿದ್ದಂತೆ, ಎಂಜಿನ್’ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ವಿಚಾರ ತಿಳಿದಿದೆ. ಕೂಡಲೇ ಎಚ್ಚೆತ್ತುಕೊಂಡ ರೈಲ್ವೆ ಸಿಬ್ಬಂದಿ, ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಬಳಿಕ ಎಂಜಿನ್’ನ ಒಳಗೆ ಕಾಣಿಸಿಕೊಂಡಿದ್ದ ಬೆಂಕಿ ನಂದಿಸಲಾಯಿತು.
ಎಂಜಿನ್’ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ, ಬದಲಿ ಎಂಜಿನ್ ವ್ಯವಸ್ಥೆ ಮಾಡಿ, ಪ್ರಯಾಣ ಮುಂದುವರೆಸಲಾಯಿತು. ರಾತ್ರಿ 1.40ರ ಹೊತ್ತಿಗೆ ಭದ್ರಾವತಿಯಿಂದ ಹೊರ ರೈಲು ಬೆಳಗ್ಗೆ 7 ಗಂಟೆ ಹೊತ್ತಿಗೆ ಬೆಂಗಳೂರು ತಲುಪಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200