ಶಿವಮೊಗ್ಗ ಲೈವ್.ಕಾಂ | 17 ಮೇ 2019
ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ) ಕಾರ್ಖಾನೆ ಪುನಾರಂಭ ಮಾಡುವಂತೆ ನಿರಂತರ ಹೋರಾಟಗಳು ನಡೆಯುತ್ತಿವೆ. ಈಗ ಈ ಹೋರಾಟ ಆನ್’ಲೈನ್ ರೂಪ ಪಡೆದಿದೆ. ಎಂಪಿಎಂ ಪುನಾರಂಭವಾಗಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಲಾಗಿದೆ.
ಕಾರ್ಖಾನೆ ಪುನಾರಂಭ ಮಾಡುವಂತೆ, ಭದ್ರಾವತಿಯ ಯುವಕರು ಟ್ವಿಟರ್’ನಲ್ಲಿ ಅಭಿಯಾನ ಶುರು ಮಾಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಟ್ಯಾಗ್ ಮಾಡಿ, ತಮ್ಮ ಮನವಿ ಸಲ್ಲಿಸುತ್ತಿದ್ದಾರೆ.
ಎಂಪಿಎಂ ಕಾರ್ಖಾನೆ ಮುಚ್ಚಿರುವುದರಿಂದ ಕಾರ್ಮಿಕರು ಮತ್ತು ಅವರ ಕುಟುಂಬ ಸಂಕಷ್ಟದಲ್ಲಿದೆ. ಹಾಗಾಗಿ ಕಾರ್ಖಾನೆ ಪುನಾರಂಭ ಮಾಡಬೇಕು ಎಂದು ಒತ್ತಾಯಿಸಲಾಗುತ್ತಿದೆ. #ReopenMysorePaperMills ಮತ್ತು #MPM_Bhadravathi ಹ್ಯಾಷ್ ಟ್ಯಾಗ್ ಮೂಲಕ ಟ್ವೀಟ್’ಗಳನ್ನು ಮಾಡಲಾಗುತ್ತಿದೆ.
ಎಂಪಿಎಂ ಪುನಾರಂಭ ಮಾಡುವಂತೆ ಈವರೆಗೂ ಸಾವಿರ ಟ್ವೀಟ್’ಗಳು ಬಂದಿವೆ. ಇದರ ಸಂಖ್ಯೆ ಹೆಚ್ಚುತ್ತಲೇ ಇದೆ. ಪ್ರಮುಖ ಟ್ವೀಟ್’ಗಳು ಇಲ್ಲಿವೆ..
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200