ವಿಐಎಸ್ಎಲ್ ಉಳಿವಿಗೆ ಟ್ವಿಟರ್’ನಲ್ಲಿ ಅಭಿಯಾನ, ಕೇಂದ್ರ ಗೃಹ ಸಚಿವರ ಭೇಟಿಯಾದ್ರು ಸಂಸದ ರಾಘವೇಂದ್ರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 16 ಜುಲೈ 2019

ವಿಐಎಸ್ಎಲ್ ಕಾರ್ಖಾನೆ ಖಾಸಗೀಕರಣಕ್ಕೆ ಕೇಂದ್ರ ಸರ್ಕಾರ ಟೆಂಡರ್ ಕರೆದಿರುವ ಹಿನ್ನೆಲೆ, ಕಾರ್ಮಿಕರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಈ ನಡುವೆ ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ, ಮನವಿ ಸಲ್ಲಿಸಿದ್ದಾರೆ. ಮತ್ತೊಂದೆಡೆ ಸಾಮಾಜಿಕ ಜಾಲತಾಣದಲ್ಲಿ ವಿಐಎಸ್ಎಲ್ ಉಳಿಸುವಂತೆ ನಡೆಯುತ್ತಿರುವ ಹ್ಯಾಷ್ ಟ್ಯಾಗ್ ಅಭಿಯಾನಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದೆ.

ಅಮಿತ್ ಷಾ ಭೇಟಿಯಾದ ರಾಘವೇಂದ್ರ

ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿದ್ದರು. ಈ ವೇಳೆ, ವಿಐಎಸ್ಎಲ್ ಕಾರ್ಖಾನೆ ಖಾಸಗೀಕರಣಗೊಳಿಸುವ ಬದಲು, ಬಂಡವಾಳ ಹೂಡಿಕೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ. ಇನ್ನು, ಶಿವಮೊಗ್ಗ ಜಿಲ್ಲೆಯ ಕೆಲವು ಯೋಜನೆಗಳ ಕುರಿತು ಮನವಿಯಲ್ಲಿ ಉಲ್ಲೇಖಿಸಿರುವುದಾಗಿ ಸಂಸದ ರಾಘವೇಂದ್ರ ಟ್ವೀಟ್ ಮಾಡಿದ್ದಾರೆ.

ಕಾರ್ಖಾನೆ ಮುಂದೆ ಹೋರಾಟ ತೀವ್ರ

ಭದ್ರಾವತಿ ವಿಐಎಸ್ಎಲ್ ಕಾರ್ಖಾನೆ ಮುಂದೆ ಕಾರ್ಮಿಕರು ನಡೆಸುತ್ತಿರುವ ಹೋರಾಟ, ಹನ್ನೆರಡನೇ ದಿನಕ್ಕೆ ಕಾಲಿಟ್ಟಿದೆ. ಕಾರ್ಮಿಕರ ಹೋರಾಟಕ್ಕೆ ಸಿಐಟಿಯು ಸಂಘಟನೆ ಬೆಂಬಲ ನೀಡಿದ್ದು, ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಕಾರ್ಮಿಕರ ಹೋರಾಟಕ್ಕೆ ಅಭಯ ನೀಡಿದ್ದಾರೆ.

  

ಸೋಷಿಯಲ್ ಮೀಡಿಯಾದಲ್ಲಿ ಹ್ಯಾಷ್ ಟ್ಯಾಗ್

ಇನ್ನು, ಸಾಮಾಜಿಕ ಜಾಲತಾಣದಲ್ಲೂ ವಿಐಎಸ್ಎಲ್ ಹೋರಾಟಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದೆ. #VISLonDeathBed ಹ್ಯಾಷ್ ಟ್ಯಾಗ್’ನಲ್ಲಿ 60 ಸಾವಿರಕ್ಕೂ ಹೆಚ್ಚು ಟ್ವೀಟ್ ಬಂದಿವೆ. ಇಡೀ ದಿನ ಈ ಹ್ಯಾಷ್ ಟ್ಯಾಗ್ ಟ್ರೆಂಡಿಂಗ್’ನಲ್ಲಿತ್ತು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment