ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | BHADRAVATHI | 16 ಡಿಸೆಂಬರ್ 2019
ಗಾಂಜಾ ಮತ್ತು ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಪ್ರತ್ಯೇಕ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರನ್ನು ಭದ್ರಾವತಿ ನ್ಯೂಟೌನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿ ಜಿಂಕ್ಲೈನ್ ನಿವಾಸಿ ಸಂತೋಷ್ ಬಂಧಿತ. ಈತನ ವಿರುದ್ದ 2018ರ ಸೆ.9ರಂದು ಗಾಂಜಾ ಮಾರಾಟ ಯತ್ನ ಪ್ರಕರಣ ದಾಖಲಾಗಿತ್ತು. ಬಳಿಕ ಜಾಮೀನಿನ ಮೇಲೆ ಹೊರಗಡೆ ಬಂದಿದ್ದ ಈತ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ನ್ಯಾಯಾಲಯ ಬಂಧನ ವಾರೆಂಟ್ ಜಾರಿಗೊಳಿಸಿತ್ತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಆರೋಪಿ ಪತ್ತೆಗೆ ಪೇದೆಗಳಾದ ಅಶೋಕ್ ಮತ್ತು ರವಿಚಂದ್ರ ಅವರನ್ನು ನಿಯೋಜಿಸಲಾಗಿತ್ತು. ಭಾನುವಾರ ಭದ್ರಾವತಿ ಸಿದ್ದಾಪುರದಲ್ಲಿ ಇರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಸಂತೋಷನನ್ನು ಬಂಧಿಸಲಾಗಿದೆ.
ವ್ಯಕ್ತಿಯನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದವನು ಅರೆಸ್ಟ್
ಮತ್ತೊಂದು ಪಕರಣದಲ್ಲಿ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಒಂದೂವರೆ ವರ್ಷದ ಬಳಿಕ ಪತ್ತೆ ಹಚ್ಚಿ ಬಂಧಿಸಲಾಗಿದೆ.
ಉಜನೀಪುರದ ಭರತ್ ಬಂಧಿತ. ಈತ 2018ರ ಮೇ 25ರಂದು ವ್ಯಕ್ತಿಯೊಬ್ಬರಿಗೆ ಹಲ್ಲೆ ಮಾಡಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. ಬಳಿಕ 4ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಮತ್ತು ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಆರೋಪಿ ವಿರುದ್ಧ ನ್ಯಾಯಾಲಯ ಬಂಧನ ವಾರೆಂಟ್ ಜಾರಿಗೊಳಿಸಿತ್ತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Two arrested by Bhadravathi Police who were absconding for a long time. One arrested in Ujanipura and other arrested in Siddapura.