ವೇಶ್ಯಾವಾಟಿಕೆ ಆರೋಪ, ಭದ್ರಾವತಿಯಲ್ಲಿ ಇಬ್ಬರ ವಿರುದ್ಧ ಕೇಸ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

ಭದ್ರಾವತಿ: ನಗರದ ಬೈಪಾಸ್ ರಸ್ತೆ ಕ್ರಾಸ್ ಸಮೀಪದ ತಗಡಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಹಣದ ಆಮಿಷವೊಡ್ಡಿ ಯುವತಿಯರನ್ನು ಅಲ್ಲಿಗೆ ಕರೆಯಿಸಲಾಗುತಿತ್ತು. ಮಾಹಿತಿ ತಿಳಿದ ಭದ್ರಾವತಿ ನ್ಯೂಟೌನ್ ಠಾಣೆಯ ಪಿಎಸ್‌ಐ ಮತ್ತು ಮಹಿಳಾ ಸಿಬ್ಬಂದಿ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಮನೆಯಲ್ಲಿ ಹಣದ ಆಮಿಷ ಒಡ್ಡಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವುದು ಪತ್ತೆಯಾಗಿದೆ. ಘಟನೆ ಸಂಬಂಧ ಇಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

BHADRAVATHI-NEWS-GRAPHICS-BY-SHIVAMOGGA-LIVE.