ಶಿವಮೊಗ್ಗದ ಲೈವ್.ಕಾಂ | SHIMOGA NEWS | 27 ಜನವರಿ 2022
ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಡಿವೈಡರ್ ಹಾರಿ ಬಂದ ಲಾರಿಯೊಂದು ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮೃತರನ್ನು ಭದ್ರಾವತಿ ಪೇಪರ್ ಟೌನ್ ನಿವಾಸಿಗಳಾದ ಷಣ್ಮುಖ ಮತ್ತು ರಾಮಚಂದ್ರ ಎಂದು ಗುರುತಿಸಲಾಗಿದೆ.
ಹೇಗಾಯ್ತು ಘಟನೆ?
ಮಾಚೇನಹಳ್ಳಿ ಬಳಿ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಶಿವಮೊಗ್ಗ ಕಡೆಯಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದ ಲಾರಿ, ಡಿವೈಡರ್ ಹಾರಿ ಬಂದಿದೆ. ಭದ್ರಾವತಿಯಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡದಿದೆ. ಷಣ್ಮುಖ ಮತ್ತು ರಾಮಚಂದ್ರ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅಪಘಾತದ ತೀವ್ರತೆಗೆ ಸಾಕ್ಷಿಯಾಗಿದೆ.
ತೀರ್ಥಹಳ್ಳಿಗೆ ತೆರಳುತ್ತಿದ್ದರು
ಪೇಪರ್ ಟೌನ್ ನಿವಾಸಿಗಳಾದ ಷಣ್ಮುಖ ಮತ್ತು ರಾಮಚಂದ್ರ ಅವರು ಭದ್ರಾವತಿಯಿಂದ ಶಿವಮೊಗ್ಗದ ಮೂಲಕ ತೀರ್ಥಹಳ್ಳಿಗೆ ತೆರಳುತ್ತಿದ್ದರು. ಈ ವೇಳೆ ಲಾರಿ ಡಿಕ್ಕಿಯಾಗಿದೆ. ಇಬ್ಬರೂ ಕಾರಿನೊಳಗೆ ಸಿಕ್ಕಿಬಿದ್ದು ಮೃತಪಟ್ಟಿದ್ದಾರೆ.
ಲಾರಿ ಚಾಲಕ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಅರೋಪಿಸಿದ್ದಾರೆ. ಅತಿ ವೇಗದಲ್ಲಿ ಚಾಲನೆ ಮಾಡುತ್ತಿದ್ದರಿಂದ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿ ಬಲಭಾಗಕ್ಕೆ ತಿರುಗಿದ್ದು, ಡಿವೈಡರ್ ಹಾರಿದೆ.
ಭದ್ರಾವತಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
All ROAD Diveder Hieght should be Increased by atleast 2feet, Till then these kind accidents un avoidable… INNOCENT Life will be Danger