ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 MARCH 2024
ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ
SHIMOGA : ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾಗರ ತಾಲ್ಲೂಕಿನ ಯಡೇಹಳ್ಳಿಯ ಪರಶುರಾಮ ಬಾಬು (16) ಸಾವಿಗೀಡಾದ ಬಾಲಕ. ಈತನ ಶವ ಮನೆಯ ಕೊಠಡಿಯಲ್ಲಿ ದೊರೆತಿದೆ. ಈತ ಆನಂದಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಓದುತ್ತಿದ್ದ. ಕಲಿಕೆಯಲ್ಲಿ ಮುಂದಿದ್ದ ಎಂದು ತಿಳಿದುಬಂದಿದೆ. ಈ ಬಗ್ಗೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು
HOLEHONNURU : ಮೂಡಲ ವಿಠಲಾಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿ ಉಮೈ ಖುಲ್ಸುಮ್ (16) ಮೃತಪಟ್ಟಿದ್ದಾಳೆ. ಜಂಬರಘಟ್ಟ ಗ್ರಾಮದ ಉಮೈ, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಬೇಕಿತ್ತು. ಇದಕ್ಕಾಗಿ ಭಾನುವಾರ ಸಂಜೆ ಶಿವಮೊಗ್ಗದ ಸಂಬಂಧಿಕರ ಮನೆಗೆ ಹೊರಟಿದ್ದಳು. ಮೂಡಲವಿಠಲಾ ಪುರದಲ್ಲಿ ಶಿವಮೊಗ್ಗದ ಬಸ್ ಹತ್ತಲು ರಸ್ತೆ ದಾಟುವಾಗ ಚನ್ನಗಿರಿ ಕಡೆಯಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಬಾಲಕಿ ಸ್ಥಳದಲ್ಲೇ ಅಸುನೀಗಿದ್ದಾಳೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಧಗಧಗ ಹೊತ್ತಿ ಉರಿದವು ವಸ್ತುಗಳು, ಬೆಂಕಿ ನಂದಿಸಿ ಮನೆ ಒಳಗೆ ಪರಿಶೀಲಿಸಿದಾಗ ಮಾಲೀಕನಿಗೆ ಕಾದಿತ್ತು ಆಘಾತ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















