ನೇಣು ಬಿಗಿದ ಸ್ಥಿತಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ | ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿಗೆ ಕಾರು ಡಿಕ್ಕಿ, ಸಾವು

SHIVAMOGGA LIVE NEWS | 26 MARCH 2024

ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ

SHIMOGA : ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾಗರ ತಾಲ್ಲೂಕಿನ ಯಡೇಹಳ್ಳಿಯ ಪರಶುರಾಮ ಬಾಬು (16) ಸಾವಿಗೀಡಾದ ಬಾಲಕ. ಈತನ ಶವ ಮನೆಯ ಕೊಠಡಿಯಲ್ಲಿ ದೊರೆತಿದೆ. ಈತ ಆನಂದಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಓದುತ್ತಿದ್ದ. ಕಲಿಕೆಯಲ್ಲಿ ಮುಂದಿದ್ದ ಎಂದು ತಿಳಿದುಬಂದಿದೆ. ಈ ಬಗ್ಗೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು

HOLEHONNURU : ಮೂಡಲ ವಿಠಲಾಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿ ಉಮೈ ಖುಲ್ಸುಮ್ (16) ಮೃತಪಟ್ಟಿದ್ದಾಳೆ. ಜಂಬರಘಟ್ಟ ಗ್ರಾಮದ ಉಮೈ, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಬೇಕಿತ್ತು. ಇದಕ್ಕಾಗಿ ಭಾನುವಾರ ಸಂಜೆ ಶಿವಮೊಗ್ಗದ ಸಂಬಂಧಿಕರ ಮನೆಗೆ ಹೊರಟಿದ್ದಳು.  ಮೂಡಲವಿಠಲಾ ಪುರದಲ್ಲಿ ಶಿವಮೊಗ್ಗದ ಬಸ್ ಹತ್ತಲು ರಸ್ತೆ ದಾಟುವಾಗ ಚನ್ನಗಿರಿ ಕಡೆಯಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಬಾಲಕಿ ಸ್ಥಳದಲ್ಲೇ ಅಸುನೀಗಿದ್ದಾಳೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಧಗಧಗ ಹೊತ್ತಿ ಉರಿದವು ವಸ್ತುಗಳು, ಬೆಂಕಿ ನಂದಿಸಿ ಮನೆ ಒಳಗೆ ಪರಿಶೀಲಿಸಿದಾಗ ಮಾಲೀಕನಿಗೆ ಕಾದಿತ್ತು ಆಘಾತ

Crime-News-General-Image

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment