ನಾಗತಿಬೆಳಗಲು ರಸ್ತೆಯಲ್ಲಿ ಪೊಲೀಸರ ದಾಳಿ, ಇಬ್ಬರು ಅರೆಸ್ಟ್‌, ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

ಭದ್ರಾವತಿ: ತಾಲ್ಲೂಕಿನ ನಾಗತಿಬೆಳಗಲು ಗ್ರಾಮದ ತಾಂಡಾ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಮಣಿಕಂಠ (19) ಹಾಗೂ ಜೀವನ್ (19) ಬಂಧಿತ ಆರೋಪಿಗಳು. ಇವರಿಂದ ₹65,500 ಮೌಲ್ಯದ 1 ಕೆ.ಜಿ 310 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Bhadravathi-Police-arrest-two-in-Nagatibelaglu

ನಾಗತಿಬೆಳಗಲು ತಾಂಡಾ ಕಡೆಯಿಂದ ಭದ್ರಾವತಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಗಾಂಜಾವನ್ನು ಮಾರಾಟ ಮಾಡಲು ಸಾಗಿಸುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆ ಭದ್ರಾವತಿ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!