ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 28 MAY 2023
SHIMOGA : ಪ್ರಮುಖ ಸೂಚನೆಗಳನ್ನು ಸಿಬ್ಬಂದಿಗೆ ನೀಡಲು ವಿವಿಧ ಇಲಾಖೆ, ಸರ್ಕಾರಿ ಸಂಸ್ಥೆಗಳಲ್ಲಿ ಪ್ರತಿದಿನ ಒಂದಿಲ್ಲೊಂದು ಸುತ್ತೋಲೆ (Circular) ಹೊರಡಿಸಲಾಗುತ್ತದೆ. ಅದರೆ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ತಮ್ಮ ಮಗಳ ಹುಟ್ಟಹಬ್ಬದ ಔತಣಕೂಟಕ್ಕೆ ಸುತ್ತೋಲೆ ಹೊರಡಿಸಿದ್ದಾರೆ. ಇದು ಚರ್ಚೆಗೆ ಕಾರಣವಾಗಿದೆ.

ಪ್ರೊ. ಬಿ.ಪಿ.ವೀರಭದ್ರಪ್ಪ ಅವರ ಮಗಳ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ವಿವಿಯ ಅಧ್ಯಾಪಕರು, ಅಧ್ಯಾಪಕೇತರ ನೌಕರರು, ಅತಿಥಿ ಉಪನ್ಯಾಸಕರು, ಏಜೆನ್ಸಿ ನೌಕರರನ್ನು ಆಹ್ವಾನಿಸಿದ್ದಾರೆ. ಇದಕ್ಕಾಗಿ ಆಮಂತ್ರಣ ಪತ್ರಿಕೆ ಬದಲು ಸುತ್ತೋಲೆ (Circular) ಹೊರಡಿಸಿದ್ದಾರೆ. ಮೇ 22ರಂದು ಸುತ್ತೋಲೆ ಹೊರಡಿಸಲಾಗಿದೆ. ಮೇ 28ರಂದು ಮಧ್ಯಾಹ್ನ 12.30ಕ್ಕೆ ಸಂತೋಷ ಕೂಟದಲ್ಲಿ ಎಲ್ಲರು ಪಾಲ್ಗೊಳ್ಳುವಂತೆ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದ ಸೆಂಟ್ರಲ್ ಜೈಲ್ ಮೇಲೆ ದಿಢೀರ್ ದಾಳಿ ನಡೆಸಿದ ಪೊಲೀಸರು
ವಿಶ್ವವಿದ್ಯಾಲಯ ಆಡಳಿತ, ನೀತಿ, ನಿಯಮಗಳ ಪಾಲನೆ, ನಡಾವಳಿ ಕುರಿತು ಸಿಬ್ಬಂದಿಗೆ ಸೂಚನೆ ನೀಡಲು ಸುತ್ತೋಲೆ ಹೊರಡಿಸಬೇಕು. ಆದರೆ ಪ್ರೊ. ಬಿ.ಪಿ.ವೀರಭದ್ರಪ್ಪ ಅವರು ವೈಯಕ್ತಿಕ ಕಾರ್ಯಕ್ರಮಕ್ಕೆ ಸುತ್ತೋಲೆ ಹೊರಡಿಸಿರುವುದು ಚರ್ಚೆ ಹುಟ್ಟುಹಾಕಿದೆ. ಇನ್ನು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರೊ. ಬಿ.ಪಿ.ವೀರಭದ್ರಪ್ಪ ಅವರು, ಅದು ಸುತ್ತೋಲೆಯಲ್ಲ ಆಹ್ವಾನವಷ್ಟೆ. ಈ ರೀತಿ ಮಾಹಿತಿ ನೀಡಲು ಅವಕಾಶವಿದೆ ಎಂದು ತಿಳಿಸಿದ್ದಾರೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





