ಭದ್ರಾವತಿ ಸಮೀಪ ರೈಲಿಗೆ ಸಿಲುಕಿ ವ್ಯಕ್ತಿ ಸಾವು, ಪತ್ತೆಯಾಗದ ಗುರುತು

ಶಿವಮೊಗ್ಗ: ಭದ್ರಾವತಿ – ಮಸರಹಳ್ಳಿ ರೈಲ್ವೆ ನಿಲ್ದಾಣದ ಮಧ್ಯೆ ಹಳಿ (Track) ಮೇಲೆ ಸೋಮವಾರ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಸುಮಾರು 45 ವರ್ಷದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಎಂದು ರೈಲ್ವೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೃತನು 5.4 ಅಡಿ ಎತ್ತರ, ಸಾದಾರಣ ಮೈಕಟ್ಟು, ಗೋದಿ ಮೈ ಬಣ್ಣ, ಕಪ್ಪು ಬಣ್ಣದ 2 ಇಂಚು ಉದ್ದದ ತಲೆ ಕೂದಲು, ಅರ್ಧ ಇಂಚು ಕಪ್ಪು ಗಡ್ಡ, ಮೀಸೆ, ಬಲಗೈನಲ್ಲಿ ಹೂವಿನ ತರಹ ಕಾಣುವ ಹಚ್ಚೆ ಇರುತ್ತದೆ. ಮೃತ ವ್ಯಕ್ತಿಯು ನೀಲಿ ಬಣ್ಣದ ಪ್ಯಾಂಟ್, ಪಾಚಿ ಹಸಿರು ಕಪ್ಪು ಗ್ರೇ ಕಲರ್ ತುಂಬು ತೋಳಿನ ಶರ್ಟ್ ಧರಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

https://chat.whatsapp.com/JPJ0lTQsTKf365Fqu6Q7cd

ವಾರಸುದಾರರು ಯಾರಾದರೂ ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆ ದೂ.ಸಂ. 08182-222974 ಮೊ.ಸಂ.948082124 ಸಂಪರ್ಕಿಸುವಂತೆ   ಶಿವಮೊಗ್ಗ ರೈಲ್ವೆ ಪೊಲೀಸ್ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಆಪರೇಷನ್‌ ಸಿಂಧೂರ, ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಯೋಧನ ಕುಟುಂಬಕ್ಕೆ ಅದ್ಧೂರಿ ಸ್ವಾಗತ, ಹೇಗಿತ್ತು? ಯಾರೆಲ್ಲ ಇದ್ದರು?

Kalleshwara-Enterprises.webp
https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment