ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 ಡಿಸೆಂಬರ್ 2021
ಭದ್ರಾವತಿಯ ಹುತ್ತಾ ಕಾಲೋನಿಯಲ್ಲಿ ವೀರಾಂಜನೇಯ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ದೇವರಿಗೆ ಹರಕೆ ತೀರಿಸಿ ಕೃಪೆಗೆ ಪಾತ್ರರಾದರು.
ರಥೋತ್ಸವದ ಅಂಗವಾಗಿ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಹೋಮ, ಹವನಗಳನ್ನು ಕೂಡ ಮಾಡಲಾಯಿತು. ಬಳಿಕ ಅಲಂಕೃತ ರಥದಲ್ಲಿ ದೇವರ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ರಥೋತ್ಸವದ ವೇಳೆ ಭಕ್ತರು ಮೆಣಸು, ಬಾಳೆ ಹಣ್ಣನ್ನು ರಥದತ್ತ ತೂರಿ ಹರಕೆ ತೀರಿಸಿದರು. ಹಣ್ಣು, ಕಾಯಿ ಮಾಡಿಸಿ ದೇವರ ಆಶೀರ್ವಾದ ಪಡೆದರು. ಸರ್.ಎಂ.ವಿಶ್ವೇಶ್ವರಯ್ಯ ಆಟೋ ಚಾಲಕರ ಸಂಘದ ವತಿಯಿಂದ ಭಕ್ತರಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿತ್ತು.
ಶಾಸಕ ಬಿ.ಕೆ.ಸಂಗಮೇಶ್ವರ, ನಗರಸಭೆ ಪೌರಾಯುಕ್ತ ಕೆ.ಪರಮೇಶ್, ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್, ಪ್ರಮುಖರಾದ ಶಾರದಾ ಅಪ್ಪಾಜಿ, ಹೆಚ್.ಸಿ.ದಾಸೇಗೌಡ, ಕರಿಯಪ್ಪ, ನಗರಸಭೆ ಸದಸ್ಯರಾದ ಮೋಹನ್ ಕುಮಾರ್, ಕಾಂತರಾಜ್, ಉಮೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್.ಕುಮಾರ್, ನಗರಸಭೆ ಮಾಜಿ ಅಧ್ಯಕ್ಷ ಎಸ್.ಎಂ.ಸುಧಾಮಣಿ, ಎಂ.ಎ.ಅಜಿತ್, ಗುಣಶೇಖರ್, ಚಂದ್ರಹಾಸ್ ಸೇರಿದಂತೆ ಹಲವರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422