SHIVAMOGGA LIVE NEWS | BHADRAVATHI | 21 ಜುಲೈ 2022
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಭದ್ರಾವತಿಯ ಹೊಸ ಸೇತುವೆಯ (NEW BRIDGE) ತಡೆಗೋಡೆಗಳು ಮುರಿದು ಹೋಗಿವೆ. ದುರಸ್ಥಿ ಕಾರ್ಯ ಮುಗಿಯುವವರೆಗೆ ಸೇತುವೆ ಮೇಲೆ ವಾಹನ ಮತ್ತು ಪಾದಚಾರಿಗಳ ಸಂಚಾರ ನಿಷೇಧಿಸಲಾಗಿದೆ.
.png)
ಭದ್ರಾ ಜಲಾಶಯದಿಂದ (BHADRA DAM) ಹೆಚ್ಚಿನ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗಿತ್ತು. ಅದ್ದರಿಂದ ನಗರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ಹೊಸ ಸೇತುವೆ ನೀರಿನಲ್ಲಿ ಮುಳುಗಿತ್ತು. ಈಗ ಜಲಾಶಯದಿಂದ ನೀರಿನ ಪ್ರಮಾಣ ತಗ್ಗಿದೆ.
ಸೇತುವೆ ಪರಿಶೀಲಿಸಿದ ಅಧಿಕಾರಿಗಳು
ಭದ್ರಾವತಿ ಹೊಸ ಸೇತುವೆಯನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದರು. ತಡೆಗೋಡೆ ಸಂಪೂರ್ಣವಾಗಿ ನೀರಿನಲ್ಲಿ ಕೊಚ್ಚಿ ಹೋಗಿವೆ. ಸದ್ಯ ಸೇತುವೆ ಅಪಾಯದ ಸ್ಥಿತಿಯಲ್ಲಿದೆ. ಆದ್ದರಿಂದ ದುರಸ್ಥಿ ಕಾರ್ಯ ಮುಗಿಯುವವರೆಗೆ ವಾಹನ ಸಂಚಾರವನ್ನು ನಿಷೇಧಗೊಳಿಸಲಾಗಿದೆ.
ಸೇತುವೆಯನ್ನು ತುರ್ತಾಗಿ ದುರಸ್ಥಿ ಮಾಡಬೇಕಿದೆ. ದುರಸ್ಥಿ ಕಾರ್ಯ ಮುಗಿಯುವವರೆಗೆ ವಾಹನ ಮತ್ತು ಪಾದಚಾರಿಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಉಪ ವಿಭಾಗಾಧಿಕಾರಿ ದೊಡ್ಡ ಗೌಡರ್, ತಹಶೀಲ್ದಾರ್ ಆರ್.ಪ್ರದೀಪ್, ಡಿವೈಎಸ್’ಪಿ ಜಿತೇಂದ್ರ ಕುಮಾರ್ ದಯಾಮಾ, ಪಿಡಬ್ಲುಡಿ ಇಂಜಿನಿಯರ್ ಸಂಪತ್ ಕುಮಾರ್, ನಗರಸಭೆ ಪೌರಾಯುಕ್ತ ಮನು ಕುಮಾರ್, ಪೊಲೀಸ್ ಇನ್ಸ್ ಪೆಕ್ಟರ್ ರಾಘವೇಂದ್ರ ಕಾಂಡಿಕೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ – ಹಂದಿ ಅಣ್ಣಿ ಬರ್ಬರ ಹತ್ಯೆ ಮಾಡಿದವರ ಫೋಟೊ ವೈರಲ್, ಆರೋಪಿಗಳು ಪೊಲೀಸ್ ಕಸ್ಟಡಿಗೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು







