ಶಿವಮೊಗ್ಗ ಲೈವ್.ಕಾಂ | BHADRAVATHI | 9 ಅಕ್ಟೋಬರ್ 2019
ಭದ್ರಾವತಿಯಲ್ಲಿ ವೈಭವದಿಂದ ವಿಜಯದಶಮಿ ಆಚರಿಸಲಾಯಿತು. ಲೋಯರ್ ಹುತ್ತಾದ ಶ್ರೀ ತಿರುಮಲ ದೇವಸ್ಥಾನದಲ್ಲಿ ಶಾಸಕ ಸಂಗಮೇಶ್ವರ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.
ಮೆರವಣಿಗೆಯಲ್ಲಿ 40ಕ್ಕೂ ಹೆಚ್ಚು ದೇವಾನುದೇವತೆಗಳು ಪಾಲ್ಗೊಂಡಿದ್ದವು. ಅಲ್ಲವೆ ವಿವಿಧ ಕಲಾ ತಂಡಗಳು ಮೆರವಣಿಗೆ ಮೆರಗು ಹೆಚ್ಚಿಸಿದವು. ಪ್ರಮುಖ ರಸ್ತೆಗಳಲ್ಲಿ ಸಾಗಿದ ಮೆರವಣಿಗೆ ಸಾಗಿದ ಮೆರವಣಿಗೆ, ಕನಕ ಮಂಟಪ ಮೈದಾನದಕ್ಕೆ ತಲುಪಿತು.
ಕನಕ ಮಂಟಪ ಮೈದಾನದಲ್ಲಿ ಬನ್ನಿ ಮಂಟಪ ಸ್ಥಾಪಿಸಲಾಗಿತ್ತು. ತಹಶೀಲ್ದಾರ್ ಸೋಮಶೇಖರ್ ಅವರು ಬನ್ನಿ ಕಡಿದರು. ಈ ವೇಳೆ ರಾವಣ ದಹನ ಮಾಡಿ, ಬನ್ನಿ ಮುಡಿಯಲಾಯಿತು. ಭಾರಿ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200