ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 14 SEPTEMBER 2023
HOLEHONNURU : ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳ ಕಾರ್ಯವೈಖರಿ ಖಂಡಿಸಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ (Locked) ಪ್ರತಿಭಟನೆ ನಡೆಸಿದರು.
ಇಲ್ಲಿನ ಆಗರದಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಕ್ಕೆ ಬೀಗ ಜಡಿದು ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಿದರು. ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ವತಿಯಿಂದ ಜಂಟಿ ಸರ್ವೆ ಮಾಡುವುದಾಗಿ ತಿಳಿಸಿದ್ದರು. ಆದರೆ ಈತನಕ ಯಾವುದೆ ಸರ್ವೆ ಮಾಡದೆ ಜನರಿಗೆ ಸಮಸ್ಯೆಯಾಗಿದೆ. ಇನ್ನು, ಗ್ರಾಮಸ್ಥರಿಗೆ ಮೂಲ ಸೌಕರ್ಯ ಒದಗಿಸಲು ಪಂಚಾಯಿತಿ ವಿಫಲವಾಗಿದೆ. ಬಡವರ ಪರವಾಗಿ ಯಾರು ಕೆಲಸ ನಿರ್ವಹಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮಸ್ಥರಾದ ಮಹೇಶ್, ರವಿ, ಹನುಮಂತ್, ರಮೇಶ್, ರಂಗನಾಥ್ ಇನ್ನಿತರರು ಭಾಗವಹಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ರೌಡಿಗಳ ಪರೇಡ್, ಖಡಕ್ ವಾರ್ನಿಂಗ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422