ಶಿವಮೊಗ್ಗ ಲೈವ್.ಕಾಂ | BHADRAVATHI | 11 ನವೆಂಬರ್ 2019
ವಿನಯ್ ಗುರೂಜಿ ಅವರು ಶಾಸಕ ಬಿ.ಕೆ.ಸಂಗಮೇಶ್ವರ್ ಅವರೊಂದಿಗೆ ಭಾನುವಾರ ಇಲ್ಲಿನ ವಿಐಎಸ್ಎಲ್ ಕಾರ್ಖಾನೆಗೆ ಭೇಟಿ ನೀಡಿದರು. ಪ್ರಸ್ತುತ ಕಾರ್ಖಾನೆಯ ಸ್ಥಿತಿಗತಿ ಬಗ್ಗೆ ಸಂಗಮೇಶ್ವರ್ ಅವರಿಂದ ಮಾಹಿತಿ ಪಡೆದ ಗುರೂಜಿ, ಕಾರ್ಖಾನೆಯ ವಿವಿಧ ಪ್ಲಾಂಟ್ಗಳ ಪರಿಶೀಲನೆ ನಡೆಸಿದರು.
ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಸೇವಾಕಾರ್ಯಗಳಿಗೆ ಚಾಲನೆ ನೀಡಲು ನಗರಕ್ಕೆ ಆಗಮಿಸಿದ್ದ ವಿನಯ್ ಗುರೂಜಿ ಅವರು ಬೆಳಗ್ಗೆ ತಾಲೂಕು ಕಚೇರಿ ರಸ್ತೆಯಲ್ಲಿರುವ ಆಂಜನೇಯಸ್ವಾಮಿ ದೇವಸ್ಥಾನ, ಹಳೇನಗರದ ಗ್ರಾಮ ದೇವತೆ ಶ್ರೀ ಹಳದಮ್ಮ, ಇತಿಹಾಸ ಪ್ರಸಿದ್ಧ ಕ್ಷೇತ್ರಪಾಲಕ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಮಹಾತ್ಮಗಾಂಧಿ ಸೇವಾ ಟ್ರಸ್ಟ್ ಅಧ್ಯಕ್ಷ ಡಾ. ಬೇಳೂರು ರಾಘವೇಂದ್ರ ಗೌರಿಗದ್ದೆ ಆಶ್ರಮದ ಕಾರ್ಯದರ್ಶಿ ಸುಧಾಕರ್, ರೈಫಲ್ ಅಸೋಸಿಯೇಷನ್ ಅಧ್ಯಕ್ಷ ಬಿ.ಮೂರ್ತಿ, ಕಾರ್ಯದರ್ಶಿ ಎಂ.ಎಸ್ ರವಿ ಇತರರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]