ವಿಐಎಸ್‌ಎಲ್‌ನ ಡೆಪ್ಯೂಟಿ ಜನರಲ್‌ ಮ್ಯಾನೇಜರ್‌ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಭದ್ರಾವತಿ: ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ (VISL) ಎಲೆಕ್ಟ್ರಿಕ್ ವಿಭಾಗದ ಡೆಪ್ಯೂಟಿ ಜನರಲ್ ಮ್ಯಾನೇಜರ್ (ಡಿಜಿಎಂ) ಗೋವಿಂದರಾಜ್ (51) ಅವರು ಅಧಿಕಾರಿಗಳ ಕ್ವಾರ್ಟರ್ಸ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. (ಈ ಸುದ್ದಿಯನ್ನು ಇನ್ನು 39 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ತಮಿಳುನಾಡಿನ ಸೇಲಂ ಮೂಲದ ಗೋವಿಂದರಾಜ್ ಕಳೆದ 13 ವರ್ಷಗಳಿಂದ ವಿಐಎಸ್‌ಎಲ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆಯಷ್ಟೇ ತಮ್ಮ ಪತ್ನಿ ಹಾಗೂ ಮಕ್ಕಳನ್ನು ಸೇಲಂಗೆ ಕಳುಹಿಸಿದ್ದರು ಎಂದು ತಿಳಿದು ಬಂದಿದೆ. ರಾತ್ರಿ ಕ್ವಾರ್ಟರ್ಸ್‌ನಲ್ಲಿ ಒಬ್ಬರೇ ಇದ್ದಾಗ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಸೋಮವಾರ ಬೆಳಿಗ್ಗೆ ಆಪ್ತ ಸಹಾಯಕ ಕರೆ ಮಾಡಿದರು ಗೋವಿಂದರಾಜ್‌ ಅವರು ಕರೆ ಸ್ವೀಕರಿಸಲಿಲ್ಲ.

VISL-Deputy-General-Manager-Govindaraj-ends-life

ಅನುಮಾನಗೊಂಡು ಆಪ್ತ ಸಹಾಯಕ ವಿಐಎಸ್ಎಲ್ ಕ್ವಾರ್ಟರ್ಸ್‌ಗೆ ತೆರಳಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬದವರು ಸೇಲಂನಿಂದ ಆಗಮಿಸುತ್ತಿದ್ದು ನಂತರ ಘಟನೆ ಕುರಿತು ಹೆಚ್ಚಿನ ಮಾಹಿತಿ ದೊರೆಯಲಿದೆ. ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.