ಶಿವಮೊಗ್ಗ ಲೈವ್.ಕಾಂ | BHADRAVATHI | 21 ಡಿಸೆಂಬರ್ 2019
ವಿಐಎಸ್‌ಎಲ್ ಕಾರ್ಖಾನೆಯಿಂದ ಜ.8ರಿಂದ ಫೆ.7ರವರೆಗೆ 31 ದಿನಗಳ ಕಾಲ ವಿಐಎಸ್‌ಎಲ್ ಉತ್ಸವ ಜರುಗಲಿದೆ ಎಂದು ಕಾರ್ಖಾನೆ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್.ಪ್ರವೀಣ್ ಕುಮಾರ್ ತಿಳಿಸಿದರು.
ಕೇರಳ ಸಮಾಜಂ ಸೇರಿ ವಿವಿಧ ಸಮಾಜಗಳ ಸಂಸ್ಕೃತಿ, ಸಂಪ್ರದಾಯ ಹಾಗೂ ವಿಶೇಷ ಖಾದ್ಯಗಳನ್ನು ಪರಿಚಯಿಸುವ, ವಿವಿಧ ಶಾಲಾ ಮಕ್ಕಳ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ ಆ ಮೂಲಕ ವೈವಿಧ್ಯತೆಯಲ್ಲಿ ಏಕತೆಯನ್ನು ಬಿಂಬಿಸುವ ಕಲಾಪ್ರಕಾರ ಈ ಉತ್ಸವದಲ್ಲಿ ಅನಾವರಣಗೊಳ್ಳಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಿಐಎಸ್‌ಎಲ್ ಕ್ರೀಡಾಂಗಣ ಆವರಣದಲ್ಲಿರುವ ಪ್ಲಾಟಿನಂ, ಜ್ಯೂಬಿಲಿ ವೇದಿಕೆಯಲ್ಲಿ ಸುಮಾರು 55 ಕಲಾ ತಂಡಗಳು ಪ್ರತಿದಿನ ಸಂಜೆ 6 ರಿಂದ 10ರವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಸಲಿವೆ. ಕಾರ್ಯಕ್ರಮದ ವಿವರವನ್ನು ವೆಬ್‌ಸೈಟ್‌ನಲ್ಲಿ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿದೆ.
ಈ ಬಾರಿ ಮನೆಯಾಕಾರದಲ್ಲಿ ವೇದಿಕೆ ಸಿದ್ದಪಡಿಸಿ ಅದರೊಳಗೆ ಸ್ಥಳೀಯ ಕಲಾವಿದರ, ಪ್ರತಿಭಾವಂತರ ಭಾವಚಿತ್ರ ಪ್ರದರ್ಶನ ಹಾಗೂ ಅವರು ಮಾಡಿರುವ ಸಾಧನೆಗಳ ಸಂಪೂರ್ಣ ಮಾಹಿತಿ ತಿಳಿಸುವ ಫಲಕಗಳನ್ನು ಅಳವಡಿಸಲಾಗುತ್ತದೆ.
ಕಾರ್ಖಾನೆ ಬೆಳೆದು ಬಂದ ದಾರಿ, ಗಣಿಗಾರಿಕೆ, ಉತ್ಪಾದನೆ, ಯಂತ್ರಗಳ ಚಾಲನೆ ಸೇರಿ ಹಲವು ಮಾದರಿಗಳ ವಸ್ತುಪ್ರದರ್ಶನ ಏರ್ಪಡಿಸಲಾಗಿದೆ. ಬಿಎಸ್‌ಎನ್‌ಎಲ್, ಪೋಸ್ಟ್ ಆಫೀಸ್, ವಿವಿಧ ಬ್ಯಾಂಕುಗಳಿಂದ ದೊರೆಯುವ ಸೇವೆಗಳು, ಕೃಷಿ ಚಟುವಟಿಕೆಗಳಲ್ಲಿ ಯಂತ್ರೋಪಕರಣಗಳ ಬಳಕೆ ಕುರಿತ ಮಾಹಿತಿ ಕೂಡ ಈ ಉತ್ಸವದಲ್ಲಿ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದರು.
ಕಾರ್ಮಿಕ ಸಂಘದ ಅಧ್ಯಕ್ಷ ಬಸಂತ್‌ಕುಮಾರ್, ಪ್ರಮುಖರಾದ ಹರೂನ್ ರಶೀದ್, ಆರ್.ಹರ್ಷಿತ್ ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200