ಶಿವಮೊಗ್ಗ ಲೈವ್.ಕಾಂ | BHADRAVATHI NEWS | 26 ಆಗಸ್ಟ್ 2020
ವಿಐಎಸ್ಎಲ್ ಕಾರ್ಖಾನೆಯ ಖಾಸಗೀಕರಣಕ್ಕೆ ಕಾರ್ಮಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಕೆ.ಎಸ್.ರಾವ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ವಿಐಎಸ್ಎಲ್ ಕಾರ್ಮಿಕ ಸಂಘ ಮತ್ತು ಗುತ್ತಿಗೆ ಕಾರ್ಮಿಕ ಸಂಘ ಜಂಟಿಯಾಗಿ ಪ್ರತಿಭಟನೆ ನಡೆಸಿ, ಕಾರ್ಖಾನೆಯನ್ನು ಖಾಸಗೀಕರಣ ನೀತಿಯಿಂದ ಹೊರತೆಗೆಯಬೇಕು. ಸರ್ಕಾರವೇ ಅಗತ್ಯವಿರುವ ಬಂಡಾವಳ ಹೂಡಿಕೆ ಮಾಡಬೇಕು ಎಂದು ಮನವಿ ಮಾಡಿದರು.
ಗುತ್ತಿಗೆ ಕಾರ್ಮಿಕರಿಗೂ ತುಟ್ಟಿಭತ್ಯೆ ಅನ್ವಯಿಸಿ ವೇತನ ನೀಡಬೇಕು, ಮೂಲ ವೇತನಕ್ಕೆ ಅನುಗುಣವಾಗಿ ಹೆಚ್‍ಆರ್‍ಎ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಾರ್ಮಿಕರು ಆಗ್ರಹಿಸಿದರು.
ಕಾರ್ಮಿಕ ಸಂಘದ ಅಧ್ಯಕ್ಷ ಜಗದೀಶ್, ಪ್ರಮುಖರಾದ ರಾಘವೇಂದ್ರ, ಬಸಂತ್ ಕುಮಾರ್, ಅಮೃತಕುಮಾರ್, ಮೋಹನ್, ಗುತ್ತಿಗೆ ಕಾರ್ಮಿಕ ಸಂಘದ ಚಂದ್ರಹಾಸ, ಸುರೇಶ್, ಶ್ರೀನಿವಾಸ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]