ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 13 ಜುಲೈ 2019
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಭದ್ರಾವತಿ ವಿಐಎಸ್ಎಲ್ ಖಾಸಗೀಕರಣ ಮಾಡಬಾರದು ಹಾಗೂ ಮುಚ್ಚಬಾರದು ಅಂತಾ, ಕಾರ್ಖಾನೆಯ ಕಾರ್ಮಿಕರು, ಗುತ್ತಿಗೆ ಕಾರ್ಮಿಕರು, ನಿವೃತ್ತ ಕಾರ್ಮಿಕರು ಭದ್ರಾವತಿಯಲ್ಲಿ ಅರೆಬೆತ್ತಲೆ ಮೆರವಣಿಗೆ ಮಾಡಿ, ಪ್ರತಿಭಟಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಅಂಬೇಡ್ಕರ್ ಸರ್ಕಲ್’ನಲ್ಲಿ ಮಾನವ ಸರಪಳಿ ನಿರ್ಮಿಸಿದ ಕಾರ್ಮಿಕರು, ರಸ್ತೆ ತಡೆ ಮಾಡಿದರು. ಕೇಂದ್ರ ಸರ್ಕಾರ, ಬಿಜೆಪಿ ಮುಖಂಡರು, ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ವಿಐಎಸ್ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜಗದೀಶ್, ಈಗಾಗಲೆ ಎಂಪಿಎಂ ಕಾರ್ಖಾನೆಗೆ ಬೀಗ ಹಾಕಲಾಗಿದೆ. ಅಲ್ಲಿನ ಕಾರ್ಮಿಕರು ಬೀದಿ ಪಾಲಾಗುವಂತಾಗಿದೆ. ಈಗ ವಿಐಎಸ್ಎಲ್ ಕಾರ್ಖಾನೆಯನ್ನು ಮುಚ್ಚಲು ಕೇಂದ್ರ ಸರ್ಕಾರ ಖಾಸಗೀಕರಣದ ನಾಟಕ ಮಾಡುತ್ತಿದೆ ಎಂದು ಆರೋಪಿಸಿದರು.
ವಿಐಎಸ್ಎಲ್ ಕಾರ್ಖಾನೆ ಉಳಿದರೆ ಭದ್ರಾವತಿಗೆ ಭವಿಷ್ಯ. ಆದ್ದರಿಂದ ಇದು ಕಾರ್ಮಿಕರ ಹೋರಾಟವಷ್ಟೆ ಅಲ್ಲ. ಇಡೀ ಭದ್ರಾವತಿ ಜನತೆಯ ಅಳಿವು ಉಳಿವಿನ ಹೋರಾಟವಾಗಿದೆ. ಇಂದು ಕಾರ್ಮಿಕರು ಕಾರ್ಖಾನೆ ಉಳಿಸಲು ಬೀದಿಗಿಳಿದು ಅರೆಬೆತ್ತಲಾಗಿದ್ದಾರೆ. ಕೇಂದ್ರ ಸರ್ಕಾರ ಕಾರ್ಖಾನೆಯನ್ನು ಸಾರ್ವಜನಿಕ ವಲಯದಲ್ಲಿ ಉಳಿಸಿಕೊಂಡು ಅಭಿವೃದ್ಧಿ ಮಾಡದಿದ್ದರೆ ಇಡೀ ಭದ್ರಾವತಿ ಜನತೆ ಬದುಕು ದುಸ್ಥರವಾಗುತ್ತದೆ ಎಂದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]