SHIVAMOGGA LIVE NEWS | 28 FEBRUARY 2023
BHADRAVATHI : ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಕಾರ್ಖಾನೆ ಪುನಶ್ಚೇತನಕ್ಕೆ ಮನವಿ ಮಾಡಲು ಅವಕಾಶ ಕಲ್ಪಿಸದ ಸ್ಥಳೀಯ ರಾಜಕಾರಣಿಗಳ ವಿರುದ್ಧ ಗುತ್ತಿಗೆ ನೌಕರರು ಆಕ್ರೋಶ ವ್ಯಕ್ತಪಡಿಸಿದರು. ಭದ್ರಾವತಿಯಲ್ಲಿ ಅಣಕು ಶವಯಾತ್ರೆ (Effigy) ಕೈಗೊಂಡು ಪ್ರತಿಭಟನೆ ನಡೆಸಿದರು.
ಭದ್ರಾವತಿಯ ಪ್ರಮುಖ ರಸ್ತೆಗಳಲ್ಲಿ ಕಳೆದ ರಾತ್ರಿ ಅಣಕು ಶವಯಾತ್ರೆ ನಡೆಸಲಾಯಿತು. ಬಿಜೆಪಿ ಸರ್ಕಾರ ಮತ್ತು ಮುಖಂಡರ ವಿರುದ್ಧ ಘೋಷಣೆ ಕೂಗಿದ ಕಾರ್ಮಿಕರು ಬಳಿಕ ನಡುರಸ್ತೆಯಲ್ಲೆ ಪ್ರತಿಕೃತಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ – ಪ್ರಧಾನಿ ಕಾರ್ಯಕ್ರಮದ ವೇದಿಕೆ ಮುಂದೆ ಬಾಯಿ ಬಡಿದುಕೊಂಡು ಗಮನ ಸೆಳೆಯಲು ಯತ್ನಿಸಿದ ಕಾರ್ಮಿಕರು
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರ ಪ್ರತಿಕೃತಿಗಳನ್ನು (Effigy) ವಿಐಎಸ್ಎಲ್ ನೌಕರರು ದಹಿಸಿದರು. ನಗರದ ವಿವಿಧೆಡೆ ಮೆರವಣಿಗೆ ನಡೆಸಿದ ಕಾರ್ಮಿಕರು, ಘೋಷಣೆ ಕೂಗಿದರು. ವಿಐಎಸ್ಎಲ್ ನೌಕರರಿಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದವು.