ಶಿವಮೊಗ್ಗ ಲೈವ್.ಕಾಂ | HOLEHONNURU | 26 ಅಕ್ಟೋಬರ್ 2019
ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ಅರಬಿಳಚಿ ಗ್ರಾಮದಲ್ಲಿ ಘಟನೆ ನಡೆದಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಲಕ್ಷ್ಮಣ (70) ಮೃತ ವ್ಯಕ್ತಿ. ಮಲಗಿದ್ದ ವೇಳೆ ಲಕ್ಷ್ಮಣ ಅವರ ಮೇಲೆಯೆ ಗೋಡೆ ಕುಸಿದಿದೆ. ಇದರಿಂದ ಲಕ್ಷ್ಮಣ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂರು ದಿನದಿಂದ ನಿರಂತರ ಮಳೆಯಾಗಿದ್ದರಿಂದ ಗೋಡೆ ಒದ್ದೆಯಾಗಿ, ಕುಸಿದಿದೆ ಎಂದು ಹೇಳಲಾಗುತ್ತಿದೆ.
ವಿಚಾರ ತಿಳಿಯುತ್ತಿದ್ದಂತ ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ, ಭದ್ರಾವತಿ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು. ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]